


ಮಡಿಕೇರಿ ಫೆ.4 NEWS DESK : ಇಂಡಿಯಾ ಟುಡೇ ಪತ್ರಿಕೆ ಆಯೋಜಿಸಿದ ಪರಿಸರ ಸಮಾವೇಶ -2025ದಲ್ಲಿ ಕೊಡಗಿನ ಪೊನ್ನಂಪೇಟೆಯ ಹಾಡಿ ನಿವಾಸಿಗಳು ಪರಿಸರ ಸಂರಕ್ಷಣೆ ಕುರಿತು ನೃತ್ಯದ ಮೂಲಕ ಗಮನ ಸೆಳೆದರು. ಪರಿಸರ ಸಂರಕ್ಷಣೆ ಹಾಗೂ ಹವಮಾನ ಬದಲಾವಣೆ ಕುರಿತು ಸಂವಾದ ಮತ್ತು ಮಾಹಿತಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ ಕಂಡ್ರೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು. ಹಾಡಿ ನಿವಾಸಿಗಳ ತಂಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಅವರ ವಿಶೇಷ ಕಾಳಜಿಯಿಂದ ಕರೆಸಿಕೊಂಡಿದ್ದರು.









