
ಕುಶಾಲನಗರ ಫೆ.4 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕುಶಾಲನಗರ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ದೊಡ್ಡತ್ತೂರು, ಚಿಕ್ಕತ್ತೂರು, ಸುಂದರನಗರ, ವಿನಾಯಕ ಬಡಾವಣೆ, ಬಸವೇಶ್ವರ ಬಡಾವಣೆ, ವಿಜಯನಗರ ಗ್ರಾಮದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ‘ಕೂಡಿಗೆ ಗ್ರಾ.ಪಂ, ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾ.ಪಂ ನ ಹಲವು ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡರವರು ಆಯಾ ವ್ಯಾಪ್ತಿಯ ಗ್ರಾ.ಪಂ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಆಯ್ಕೆಯಾದ ದಿನದಿಂದ ಈವರೆಗೆ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನಗಳನ್ನು ತರಲಾಗಿದೆ. ಕ್ಷೇತ್ರದ ಅಭಿವೃದ್ಧಿಯ ಧ್ಯೇಯದೊಂದಿಗೆ ಇನ್ನಷ್ಟು ಉತ್ಸಾಹ ಹಾಗೂ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸಲಾಗುವುದು ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಬಾಸ್ಕರ ನಾಯಕ್, ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಫಿಲೋಮಿನಾ, ಕೆ.ಬಿ.ಶಂಶುದ್ಧೀನ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕುಮಾರ್, ತಂಬಿ, ರಫಿಕ್, ಹರೀಶ್, ಆಯಾ ಗ್ರಾ.ಪಂ ವ್ಯಾಪ್ತಿಯ ಪಂಚಾಯಿತಿ ಸದಸ್ಯರು, ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿಗಳು ಹಾಗೂ ಇತರರು ಇದ್ದರು.









