

ಮಡಿಕೇರಿ ಫೆ.5 NEWS DESK : ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯಲ್ಲಿ 65 ಲಕ್ಷ ವೆಚ್ಚದ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ಹಾಗೂ ಆರಂಭಿಸುವ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಚಪ್ಪಂಡಕೆರೆಯ ಅಡ್ಕದಬಾಣೆಯಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಇನ್ನೂ ಹೆಚ್ಚಿನ ಅನುದಾನವನ್ನು ಗ್ರಾಮಕ್ಕೆ ನೀಡುವ ಭರವಸೆ ನೀಡಿದರು. ಪಂಚಾಯತ್ ವ್ಯಾಪ್ತಿಯ ಕಾಲೂರು ಗ್ರಾಮದಲ್ಲಿ ರಸ್ತೆ ಮತ್ತು ಮೂಲಭೂತ ಸೌಲಭ್ಯ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ತಾವೇ ಖುದ್ದಾಗಿ ಕಾಲೂರಿಗೆ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ಚೆಸ್ಕಾಂ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲಿಸಿ ಕ್ರಮ ಜರುಗಿಸುವುದಾಗಿ ಸ್ಪಷ್ಟ ಪಡಿಸಿದರು. ಪ್ರಮುಖರಾದ ಹೆಚ್.ಎ.ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ವಿ.ಜಿ.ಮೋಹನ್, ಪುಷ್ಪ ಪೂಣಚ್ಚ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧೀಕಾರದ ಸದಸ್ಯರಾದ ಹರಿಪ್ರಸಾದ್ ಕೋಚನ, ಗ್ರಾ.ಪಂ ಪಿ.ಡಿ ಒ ಶಶಿಕಿರಣ್, ಸುಭಾಶ್ ಆಳ್ವ, ರೋಷನ್ ಕೊಂಬಾರನ, ಪೊನ್ನಪ್ಪ ಕಾಲೂರು, ಗಣಪತಿ ಕೊಂಬಾರನ, ಅನಂತಕುಮಾರ್ ಕೋಲುಮುಡಿಯನ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.











