Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ’ಯಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ’ಯಿಂದ ಪ್ರತಿಭಟನೆ*

ಫೆಬ್ರವರಿ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.5 NEWS DESK : ಜಿಲ್ಲಾ ಕೇಂದ್ರ ಮಡಿಕೇರಿ ನಗರದ ಸುದರ್ಶನ ವೃತ್ತದ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಪಟ್ಟಭದ್ರ ಹಿತಾಸಕ್ತಿಗಳಿಂದ ಮುಕ್ತಗೊಳಿಸಿ, ದಲಿತ ಸಮುದಾಯದ ಬಳಕೆಗೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿ ‘ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ’ಯಿಂದ ಫೆ.10 ರಂದು ಅಂಬೇಡ್ಕರ್ ಭವನದ ಎದುರು ಧರಣಿ ನಡೆಸುವುದಾಗಿ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ವ್ಯಾಪ್ತಿಯ ದಲಿತ ಸಂಘಟನೆ, ಸಾರ್ವಜನಿಕರ ಸಹಕಾರ ಮತ್ತು ಸರ್ಕಾರದ ನೆರವಿನಿಂದ ನಿರ್ಮಿಸಲ್ಪಟ್ಟ ಡಾ.ಬಿ.ಆರ್.ಅಂಬೇಡ್ಕರ್ ಭವನ ಇತ್ತೀಚಿನ ದಿನಗಳಲ್ಲಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಇದರಿಂದ ದಲಿತ ಪರವಾದ ಕಾರ್ಯಕ್ರಮಗಳನ್ನು ಭವನದಲ್ಲಿ ಮುಕ್ತವಾಗಿ ನಡೆಸಲು ಅವಕಾಶಗಳು ದೊರಕುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಿಲ್ಲೆಯ ವಿವಿಧೆಡೆಗಳಲ್ಲಿನ ದಲಿತ ಸಂಘಟನೆಗಳು, ಸಾರ್ವಜನಿಕರು ಅಂದಿನ ದಿನಗಳಲ್ಲಿ ತಮ್ಮ ನೆರವನ್ನು ನೀಡಿದ್ದಾರೆ. ಇಂತಹ ವಿಚಾರವನ್ನು ಪ್ರಸ್ತಾಪಿಸಿದ ನನ್ನ ಮೇಲೆ ಅಂಬೇಡ್ಕರ್ ಭವನ ಸಮಿತಿಯ ಕೆಲವರು ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ಹೇಳಿಕೆಗಳಾಗಿವೆ ಎಂದು ಸ್ಪಷ್ಟಪಡಿಸಿದರು. ತಾನೊಬ್ಬ ಬ್ಯಾಂಕ್ ಉದ್ಯೋಗಿಯಾಗಿ ಸೇವೆ ಸಲ್ಲಿಸಿದ್ದೇನೆ ಹಾಗೂ ದಲಿತ ಸಂಘರ್ಷ ಸಮಿತಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿಕೊಂಡು ಬಂದಿದ್ದೇನೆ. ಈ ಹಿಂದೆ ತಾನು ಆರ್ಥಿಕವಾಗಿ ಹೇಗಿದ್ದೆ ಅದೇ ರೀತಿಯಲ್ಲಿ ಇಂದು ಕೂಡ ಇದ್ದೇನೆ. ನನ್ನ ವಿರುದ್ಧ ದುರುಪಯೋಗ ಮೊದಲಾದ ಆರೋಪಗಳನ್ನು ಮಾಡಿರುವುದು ಖಂಡನೀಯ. ಪರಿಶಿಷ್ಟ ವಿದ್ಯಾರ್ಥಿಗಳ ಉತ್ತೇಜನಕ್ಕಾಗಿ ಮತ್ತು ಶಿಕ್ಷಕರಿಗೆ ಗೌರವಾರ್ಪಣೆ ಸಲ್ಲಿಸುವುದಕ್ಕಾಗಿ ನನ್ನ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಇದರಿಂದ ಕೊಡಗು ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರಲು ಸಹಕಾರಿಯಾಗಿರುವುದನ್ನು ನನ್ನ ವಿರುದ್ಧ ಆರೋಪ ಮಾಡುವವರು ಅರಿತುಕೊಳ್ಳಲಿ ಎಂದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ.ಎನ್.ಗೋವಿಂದಪ್ಪ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಭವನ ನಮ್ಮ ಸಮುದಾಯದ ಅನುಕೂಲತೆಗಾಗಿ ಬಳಕೆ ಮಾಡಲು ಮುಕ್ತ ಅವಕಾಶ ದೊರಕಬೇಕು ಎನ್ನುವುದಷ್ಟೆ ನಮ್ಮ ಪ್ರಮುಖ ಉದ್ದೇಶ. ಈಗ ಭವನದ ಉಸ್ತುವಾರಿ ಹೊತ್ತವರು ಇದಕ್ಕೆ ಅನುಮತಿ ನೀಡಲಿ ಮತ್ತು ಭವನವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲಿ. ಇದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲವೆಂದು ತಿಳಿಸಿದರು. ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯಲ್ಲಿ ಜಿಲ್ಲಾ ವ್ಯಾಪ್ತಿಯ ದಲಿತ ಪರ, ಪ್ರಗತಿಪರವಾದ ಸುಮಾರು 37 ಸಂಘಟನೆಗಳು ಇರುವುದಾಗಿ ತಿಳಿಸಿದ ಗೋವಿಂದಪ್ಪ, ಫೆ.10 ರಂದು ಬೆಳಗ್ಗೆ 10.30 ಗಂಟೆಗೆ ಭವನದ ಎದುರು ಧರಣಿ ನಡೆಸಲಿದ್ದೇವೆ ಎಂದ ಅವರು, ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಡಿ.ಜೆ.ಈರಪ್ಪ, ಖಜಾಂಚಿ ಹೆಚ್.ಈ.ದೇವರಾಜು, ನಿರ್ದೇಶಕರಾದ ಹೆಚ್.ಎಲ್.ಕುಮಾರ್ ಹಾಗೂ ಎ.ಪಿ.ದೀಪಕ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.