ಮಡಿಕೇರಿ ಫೆ.5 NEWS DESK : ಬಿಟ್ಟಂಗಾಲದಲ್ಲಿರುವ ಸಮಾಜದ ಕಟ್ಟಡ ಅಭಿವೃದ್ಧಿಯ ಮುಂದುವರಿದ ಕಾಮಗಾರಿಗೆ ಅನುದಾನ ಕೊರಿ ಕೊಡಗು ಹೆಗ್ಗಡೆ ಸಮಾಜದ ನಿಯೋಗವು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರನ್ನು ಭೇಟಿ ಮಾಡಿತು. ಬೆಂಗಳೂರಿನ ವಿಕಾಸಸೌಧದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಪ್ರಮುಖರು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ, ಉಪಾಧ್ಯಕ್ಷ ಕೊರಕುಟ್ಟಿರ ಸರಚಂಗಪ್ಪ, ನಿರ್ದೇಶಕರಾದ ಕೊರಂಡ ಪ್ರಕಾಶ್ ನಾಣಯ್ಯ, ಪ್ರಮುಖರಾದ ಪಡಿಞರಂಡ ಗಿರೀಶ್, ಕಾಕೇರ ರವಿ ಮತ್ತಿತರ ಪ್ರಮುಖರು ಹಾಜರಿದ್ದರು.











