



ನಾಪೋಕ್ಲು ಫೆ.6 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿಯು ಕಾಂಗ್ರೆಸ್ ಆಡಳಿತದಲ್ಲಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಭಿವೃದ್ಧಿ ಸಹಿಸದ ಕೆಲವು ಕಿಡಿಗೇಡಿಗಳು ಪಂಚಾಯಿತಿ ಹಾಗೂ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಅವರಿಗೆ ಲಿಖಿತ ದೂರು ಸಲ್ಲಿಸಿದ ಗ್ರಾ.ಪಂ ಚುನಾಯಿತ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದರು. ತಪ್ಪಿದ್ದಲ್ಲಿ ಪಂಚಾಯಿತಿ ಹಾಗೂ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಕಾಂಗ್ರೆಸ್ ವಲಯ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಬೂತ್ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ ಹಾಗೂ ಗ್ರಾ.ಪಂ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.