
NEWS DESK *ಕೊಡವರ ಪಾದಯಾತ್ರೆ : ಫೆ.7 ರಂದು ಮಡಿಕೇರಿಯಲ್ಲಿ 700 ಕ್ಕೂ ಅಧಿಕ ಪೊಲೀಸರ ನಿಯೋಜನೆ : ಮದ್ಯ ಮಾರಾಟ ನಿಷೇಧ*
ದಿನಾಂಕ: 07-02-2025 ರಂದು ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೆಳಿಗ್ಗೆ 06 ರಿಂದ ರಾತ್ರಿ 12 ಘಂಟೆ ವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ. > ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರು ಶಾಂತಿಯುತವಾಗಿ ರಸ್ತೆಯ ಒಂದು ಬದಿಯಲ್ಲಿ ತೆರಳುವುದು. > ಪಾದಯಾತ್ರೆಯ ಆಯೋಜಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುವವರ ವಾಹನಗಳನ್ನು ಪಾರ್ಕಿಂಗ್‌ಗೆ ನಿಗಧಿಪಡಿಸಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದು ಹಾಗೂ ಪಾದಯಾತ್ರೆಯೊಂದಿಗೆ ವಾಹನಗಳು ಬರದಂತೆ ನೋಡಿಕೊಳ್ಳವುದು. > ಪಾದಯಾತ್ರೆಯಲ್ಲಿನ ಸ್ವಯಂ ಸೇವಕರು ಸಾರ್ವಜನಿಕರಿಗೆ ಹಾಗೂ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುವುದು. > ಪಾದಯಾತ್ರೆ ಸಮಯದಲ್ಲಿ ಎಲ್ಲಿಯು ರಸ್ತೆ ತಡೆ ಮಾಡದಂತೆ ಸ್ವಯಂ ಸೇವಕರು ನೋಡಿಕೊಳ್ಳವುದು. > ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ಸೂಕ್ತ ಕ್ರಮ ಕೈಗೊಳ್ಳುವುದು. ವಿಶೇಷ ಸೂಚನೆ:- ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228330 ಮತ್ತು 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಆಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ. ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ











