



ಮಡಿಕೇರಿ ಫೆ.6 NEWS DESK : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ್‍ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ, 28 ಕೊನೆಯ ದಿನವಾಗಿದೆ. ಪ್ರಶಸ್ತಿ ಪಡೆಯಲು ಯಾವುದೇ ಜನಾಂಗ, ಲಿಂಗ, ಜಾತಿ ಅಥವಾ ಸಮುದಾಯದ ವ್ಯತ್ಯಾಸವಿಲ್ಲದೆ ಅಥವಾ ತಾರತಮ್ಯವಿಲ್ಲದೆ ಈ ಪ್ರಶಸ್ತಿಗೆ ಯಾವುದೇ ಭಾರತೀಯರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ಅಸ್ಪøಶ್ಯತೆ ನಿವಾರಣೆ ಮಾಡಲು ಹಾಗೂ ದೌರ್ಜನ್ಯ ಅಪರಾಧಗಳ ನಿಯಂತ್ರಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಾಗಿರಬೇಕು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ -08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.