ಮಡಿಕೇರಿ ಫೆ.7 NEWS DESK : ನಗರಸಭೆ ವ್ಯಾಪ್ತಿಯಲ್ಲಿ 2 ಲೀ.ಗಿಂತಲೂ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲಿಗಳ ಬಳಕೆ ಹಾಗೂ ಮಾರಾಟವನ್ನು ಸಂಪೂರ್ಣ ನಿಷೇಧಿಸಿದ್ದು, ಸಾರ್ವಜನಿಕರು ಹಾಗೂ ಉದ್ದಿಮೆದಾರರು ಮಡಿಕೇರಿ ನಗರಸಭೆಯವರೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತ ಹೆಚ್.ಆರ್.ರಮೇಶ್ ತಿಳಿಸಿದ್ದಾರೆ.











