Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವರ ಬೃಹತ್ ಪಾದಯಾತ್ರೆ ಸಮಾರೋಪ : ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ ಅಖಿಲ ಕೊಡವ ಸಮಾಜ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವರ ಬೃಹತ್ ಪಾದಯಾತ್ರೆ ಸಮಾರೋಪ : ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ ಅಖಿಲ ಕೊಡವ ಸಮಾಜ*

ಫೆಬ್ರವರಿ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.7 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಕೊಡವ ಮಂದ್‍ನಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್ ಅವರಿಗೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ನೇತೃತ್ವದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.

:: ಬೇಡಿಕೆಗಳು :: 
ಸೂಕ್ಷ್ಮಾತಿ ಸೂಕ್ಷ್ಮ ಅಲ್ಪಸಂಖ್ಯಾತ ಕೊಡವ ಜನಾಂಗದ ಸಂವಿಧಾನಬದ್ಧ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಕೊಡವ ಜನಾಂಗದ ಪರಂಪರೆ, ಧಾರ್ಮಿಕ ಆಚರಣೆಗಳು, ಸಾಮಾಜಿಕ ಭದ್ರತೆಗೆ ಪೂರಕವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೊಡವರು ಹಾಗೂ ಜಮ್ಮಾ ಹಿಡುವಳಿದಾರರ ಕೋವಿ ವಿನಾಯಿತಿಯ ವಿಶೇಷ ಹಕ್ಕನ್ನು ಅಭಾದಿತವಾಗಿ ಮುಂದುವರಿಸಬೇಕು.
ಕೊಡವ ಸಮುದಾಯದ ಮೇಲೆ ಪ್ರಬಲ ಜನಾಂಗಗಳು ರಾಜಕೀಯ ಪ್ರಭಾವ ಬಳಸಿ ನಡೆಸುತ್ತಿರುವ ದಬ್ಬಾಳಿಕೆಗೆ ಕಡಿವಾಣ ಹಾಕಬೇಕು. ಕೊಡವ ಸಂಸ್ಕೃತಿ, ಸಂಪ್ರದಾಯ, ಉಡುಗೆ ತೊಡುಗೆ, ಆಭರಣಗಳು, ಆಚರಣೆಗಳ ವಿಡಂಬನಾತ್ಮಕ ಬಳಕೆ ಮತ್ತು ಕೊಡವರ ಭಾವನೆಗಳಿಗೆ ದಕ್ಕೆ ತರುವ ಪ್ರಚೋದನಾತ್ಮಕ ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಕೊಡವರು ಎಂಬ ಕಾರಣಕ್ಕೆ ಈ ದೇಶದ ಅಪ್ರತಿಮ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳಿಗೆ ಅಗೌರವ ತೋರಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ, ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಗಡಿಪಾರು ಮಾಡಬೇಕು.
ತಲಕಾವೇರಿಯಲ್ಲಿ ಕೊಡವರ ಭಾಗವಹಿಸುವಿಕೆಯ ಸ್ವಾತಂತ್ರ್ಯಕ್ಕೆ ನಿರಂತರ ತೊಂದರೆ ಮಾಡುವ ಪ್ರಕ್ರಿಯೆಗಳಿಗೆ ಕಡಿವಾಣ ಹಾಕಬೇಕು. ಗೊಂದಲ ಸೃಷ್ಟಿಸುವ ಪಟ್ಟಭದ್ರಹಿತಾಸಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೊಡವರಿಗೆ, ಕೊಡವ ಸಂಸ್ಕೃತಿಗೆ ಕೊಡಗಿನ ಯಾವುದೇ ಧಾರ್ಮಿಕ ಕ್ಷೇತ್ರಗಳಲ್ಲಿ ಅವಮಾನವಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕೊಡವರು, ಕೊಡವ ಸಂಸ್ಕೃತಿ ಮತ್ತು ಕೊಡವ ಪಾರಂಪರಿಕ ಆಚರಣೆಗಳಿಗೆ ಈ ನೆಲದಲ್ಲಿ ಮುಕ್ತ ವಾತವರಣ ಕಲ್ಪಿಸಬೇಕು.
ಕಟ್ಟೆಮಾಡುವಿನ ಮಹಾದೇವರ ದೇವಸ್ಥಾನವನ್ನು ಮೃತ್ಯುಂಜಯ ದೇವಸ್ಥಾನವೆಂದು ಸುಳ್ಳುನಾಮಕರಣ ಮಾಡುವ ಮೂಲಕ ದೇವಸ್ಥಾನದ ಪಾವಿತ್ರ್ಯತೆಯನ್ನು ನಾಶಮಾಡಲಾಗಿದೆ. ಉದ್ದೇಶಪೂರ್ವಕವಾಗಿ ಜನಾಂಗಗಳ ನಡುವೆ ವಿಷಬೀಜವನ್ನು ಬಿತ್ತಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದ್ದು, ದೇವಸ್ಥಾನದ ಅರ್ಚಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಕಟ್ಟೆಮಾಡು ವಾರ್ಷಿಕ ಉತ್ಸವದ ಸಂದರ್ಭ, ಕೊಡವರ ಸಾಂಸ್ಕೃತಿಕ ಉಡುಗೆಯನ್ನು ನಿರ್ಬಂಧಿಸಲು ಪ್ರಯತ್ನಿಸಿ, ಕೊಡವರ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳದ ಹೊರತು ಕೊಡವ ಸಮುದಾಯ ಯಾವುದೇ ಸಂಧಾನ ಸಭೆ ಅಥವಾ ಯಾವುದೇ ಶಾಂತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.