



ಮಡಿಕೇರಿ ಫೆ.7 NEWS DESK : ಕತ್ತಲೆಕಾಡು-ಜೇನುಕೊಲ್ಲಿ ಶ್ರೀ ವಿನಾಯಕ ಸೇವಾ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ ಫೆ.9 ರಂದು ನಡೆಯಲಿದೆ. ಸಂಜೆ 4 ಗಂಟೆಗೆ ಟ್ರಸ್ಟ್ ಆವರಣದಲ್ಲಿ ಅಧ್ಯಕ್ಷ ಕೆ.ಕೆ.ಹೊನ್ನಪ್ಪ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆಯುವ ಮಹಾಸಭೆಯನ್ನು ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಡಿ.ಎಂ.ಸುಜಾತ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಾರ್ಯಕಾರಿ ಸದಸ್ಯ ಕೆ.ಕೆ.ದಿನೇಶ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಭಾವತಿ ಗ್ರಾ.ಪಂ ಸದಸ್ಯೆ ಪ್ರಭಾವತಿ ಕರ್ಪಸ್ವಾಮಿ, ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ತರಬೇತುದಾರರಾದ ಎಂ.ಕೆ.ಸುಬ್ರಮಣ್ಯ, ಸುರೇಶ್ ಮಾವಟ್ಕರ್, ಟ್ರಸ್ಟ್ ಕಾರ್ಯದರ್ಶಿ ಬ್ರಿಜೇಶ್ ರೈ, ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ.ಯು.ಸುರೇಶ್, ಮಹಿಳಾ ಘಟಕ ಅಧ್ಯಕ್ಷೆ ಪುಷ್ಪ ಜನಾರ್ದನ್, ವಿದ್ಯಾರ್ಥಿ ಘಟಕ ಅಧ್ಯಕ್ಷೆ ಎಂ.ಎಂ.ದೀಕ್ಷಾ ಉಪಸ್ಥಿತರಿರಲಿದ್ದಾರೆಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.