ಮಡಿಕೇರಿ ಫೆ.8 NEWS DESK : ಯಲಕನೂರು-ಕಾಟಿಕೊಪ್ಪಲು ಶ್ರೀ ಚಾಮುಂಡೇಶ್ವರಿ ದೇವಾಲಯದ ಎರಡನೇ ವಾರ್ಷಿಕೋತ್ಸವ ಹಾಗೂ ಉತ್ಸವ ಮೂರ್ತಿಯ ಮೆರವಣಿಗೆ ಫೆ.8 ಮತ್ತು 9 ರಂದು ನಡೆಯಲಿದೆ. ದೇವಾಲಯದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಫೆ.8 ರಂದು ಸಂಜೆ 6 ಗಂಟೆಗೆ ಶುದ್ದ ಪುಣ್ಯಾಹ ಗಣಪತಿ ಪೂಜೆ, ನವಗ್ರಹ ಪೂಜೆ, ದೇವಾಲಯ ಒಕ್ಕೂಟ ಸಮಿತಿಯ ಸಂಕಲ್ಪ, 8.30 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಫೆ.9 ರಂದು ಚಾಮುಂಡೇಶ್ವರಿ ತಾಯಿಯ ವಾರ್ಷಿಕ ಪೂಜೆ ಜರುಗಲಿದ್ದು, ಬೆಳಿಗ್ಗೆ 6 ಗಂಟೆಗೆ ಮಂಗಳ ವಾಧ್ಯದೊಂದಿಗೆ ಕಳಸ ತರುವುದು, 8 ಗಂಟೆಯಿಂದ ಗಣಪತಿ ಹೋಮ, ತಾಯಿಗೆ ಕಲತತ್ವ ಹೋಮ, ತಾಯಿಯ ಮೂರ್ತಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ನಂತರ ಅನ್ನಪ್ರಸಾದ ವಿನಿಯೋಗ ನೆರವೇರಲಿದೆ. ಸಂಜೆ 6 ಗಂಟೆಯಿಂದ ಉತ್ಸವ ಮೂರ್ತಿಯನ್ನು ಊರಿನ ಪ್ರಮುಖ ಬೀದಿಯಲ್ಲಿ ವಾಧ್ಯಗೋಷ್ಠಿಯೊಂದಿಗೆ ಅಲಂಕೃತ ಮಂಟಪದಲ್ಲಿ ಮೆರವಣಿಗೆ ಮಾಡಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.












