ಸುಂಟಿಕೊಪ್ಪ ಫೆ.8 NEWS DESK : ಹುಚ್ಚು ನಾಯಿಯೊಂದು ಹಸುವಿಗೆ ಕಚ್ಚಿದ ಪರಿಣಾಮ ಹಸು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ವಿಕ್ರಂ ಬಡಾವಣೆಯಲ್ಲಿ ನಡೆದಿದೆ. ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 7ನೇ ಮೈಲ್ ಗ್ರಾಮದ ವಿಕ್ರಂ ಬಡಾವಣೆಯಲ್ಲಿ ಹುಚ್ಚು ನಾಯಿಯೊಂದು ಸೇರಿಕೊಂಡಿದ್ದು, ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಸಾಕು ನಾಯಿಗಳು ಸೇರಿದಂತೆ ಇತರೆ ಪ್ರಾಣಿಗಳನ್ನು ಕಚ್ಚಿರುವ ಸಂಶಯ ವ್ಯಕ್ತಪಡಿಸಿರುವ ನಿವಾಸಿಗಳು, ನಾಯಿಗಳ ನಿಯಂತ್ರಣಕ್ಕೆ ಗ್ರಾಮ ಪಂಚಾಯಿತಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.











