ಮಡಿಕೇರಿ ಫೆ.8 NEWS DESK : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಯಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಜೈಕಾರ ಹಾಕಿ ಸಂಭ್ರಮಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪಕ್ಷದ ಪ್ರಮುಖರಾದ ಮನು ಮಂಜುನಾಥ್, ಬೊಳ್ಳಜಿರ ಬಿ.ಅಯ್ಯಪ್ಪ ಸೇರಿದಂತೆ ನಗರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.











