ಸುಂಟಿಕೊಪ್ಪ NEWS DESK ಫೆ.8 : ದೆಹಲಿ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಶನಿವಾರ ಸಂಜೆ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ಪ್ರಧಾನಿ ನರೇಂದ್ರಮೋದಿ ಪರ ಜಯಘೋಷ ಕೂಗಿ, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿ ಸಂಭ್ರಮಿಸಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಧನು ಕಾವೇರಪ್ಪ, ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಪಕ್ಷದ ಹಿರಿಯ ಮುಖಂಡರುಗಳಾದ ಡಿ.ನರಸಿಂಹ, ಲೀಲಾವತಿ, ಶಕ್ತಿ ಕೇಂದ್ರದ ನಿಕಟಪೂರ್ವ ಅಧ್ಯಕ್ಷ ಬಿ.ಕೆ.ಪ್ರಶಾಂತ್, ಗ್ರಾ.ಪಂ.ಸದಸ್ಯೆ ವಸಂತಿ, ಪಟ್ಟೆಮನೆ ಉದಯಕುಮಾರ್, ವಿ.ಎ.ಸಂತೋಷ್, ಪ್ರಶಾಂತ್ (ಪ್ರಶು), ಕೆದಕಲ್ ರಮೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.










