Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವರಿಗೆ ಸಾಂಪ್ರದಾಯಿಕ ಉಡುಪಿನ ಮಹತ್ವದ ಅರಿವಾಗಿದೆ : ಸಿಎನ್‌ಸಿಯ ಉದ್ದೇಶ ಫಲ ನೀಡಿದೆ : ಎನ್.ಯು.ನಾಚಪ್ಪ ಪ್ರತಿಪಾದನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವರಿಗೆ ಸಾಂಪ್ರದಾಯಿಕ ಉಡುಪಿನ ಮಹತ್ವದ ಅರಿವಾಗಿದೆ : ಸಿಎನ್‌ಸಿಯ ಉದ್ದೇಶ ಫಲ ನೀಡಿದೆ : ಎನ್.ಯು.ನಾಚಪ್ಪ ಪ್ರತಿಪಾದನೆ*

ಫೆಬ್ರವರಿ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.9 : ಆದಿಮಸಂಜಾತ ಕೊಡವ ಬುಡಕಟ್ಟು ಜನರ ಸಾಂಪ್ರದಾಯಿಕ ಉಡುಪಿನ ಮಹತ್ವದ ಕುರಿತು ಕಳೆದ 35 ವರ್ಷಗಳಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಾಗೃತಿ ಮೂಡಿಸುತ್ತಲೇ ಬಂದಿದ್ದು, ನಮ್ಮ ಪ್ರಯತ್ನ ಫಲ ನೀಡಿರುವುದಕ್ಕೆ ಕೊಡವರ ಬೃಹತ್ ಪಾದಯಾತ್ರೆಯಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿ ಕೊಡವರು ರಾರಾಜಿಸಿರುವುದೇ ಸಾಕ್ಷಿಯಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಫೆ.7 ರಂದು ಮಡಿಕೇರಿಯಲ್ಲಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಹಸ್ರ ಸಹಸ್ರ ಕೊಡವರು ಕೆಂಪು ತಲೆವಸ್ತ್ರ, ಕುಪ್ಯಚೇಲೆ ಮತ್ತು ಕೊಡವ ಪೊಡೆಯ ಉಡುಪಿನಲ್ಲಿ ಸಾಗುವ ಮೂಲಕ ಧೀರ ಕೊಡವರ ಗಾಂಭೀರ್ಯವನ್ನು ಪ್ರದರ್ಶಿಸಿದ್ದಾರೆ. ಇದಕ್ಕಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲಾ ಕೊಡವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಳೆದ 35 ವರ್ಷಗಳಿಂದ ಆದಿಮಸಂಜಾತ ಕೊಡವ ಲೋಕದ ಅದಮನೀಯ ಧ್ವನಿ ಮತ್ತು ಸ್ಥಿತಿ ಸ್ಥಾಪಕತ್ವದ ಚಳುವಳಿಯ ಮೂಲಕ ಸಿಎನ್‌ಸಿ ಸಂಘಟನೆ ಶ್ರಮಿಸುತ್ತಿದೆ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕು ಹಾಗೂ ಎಸ್‌ಟಿ ಟ್ಯಾಗ್ ಗಾಗಿ ನಿರಂತರ ಶಾಂತಿಯುತ ಹೋರಾಟವನ್ನು ನಾವು ನಡೆಸುತ್ತಿದ್ದೇವೆ. ನಮ್ಮನ್ನಾಳುತ್ತಿರುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಕೊಡವರು ವಿಶಿಷ್ಟ ಜನಾಂಗಕ್ಕೆ ಸೇರಿದವರು ಮತ್ತು ತಮ್ಮದೇ ಆದ ಸಾಂಪ್ರದಾಯಿಕ ವಸ್ತç ವಿನ್ಯಾಸ ಹೊಂದಿದ್ದಾರೆ ಎನ್ನುವುದನ್ನು ಸಾಕ್ಷೀಕರಿಸಲು ಹೋರಾಟ ಆರಂಭವಾದಾಗಿನಿಂದ ಇಂದಿನವರೆಗೆ ಕೆಂಪು ತಲೆ ವಸ್ತçವನ್ನು ಧರಿಸುತ್ತಲೇ ಬಂದಿದ್ದೇವೆ. ಆ ಮೂಲಕ ತಪಸ್ಸಿನಂತೆ ಸಮಸ್ತ ಕೊಡವರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೇವೆ.
ಆದಿಮ ಸಂಜಾತ ಕೊಡವ ಜನರ ಶಾಸನಬದ್ಧ ಹಕ್ಕೊತ್ತಾಯಗಳನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಲು ಕೊಡವ ಹೆಗ್ಗರುತುಗಳಾದ ಭಾಷೆ, ಸಂಸ್ಕೃತಿ, ಪರಂಪರೆ, ಉಡುಗೆ ತೊಡುಗೆ, ಆರಾಧಾನಾ ಪದ್ಧತಿಯ ಕುರಿತು ದೇಶದ ಜನರಿಗೆ ಹಾಗೂ ಸರಕಾರಗಳಿಗೆ ಅರಿವಿಕೆ ಮೂಡಿಸುವ ಕಾರ್ಯವಾಗಬೇಕು. ಇದು ಸಂವಿಧಾನದ 51 ಎಎಫ್ ವಿಧಿಯಡಿ ಅಡಕವಾಗಿದೆ. ಕೊಡವರು ವಿಶಿಷ್ಟ ಜನಾಂಗಕ್ಕೆ ಸೇರಿದವರು, ನಮ್ಮ ಹಕ್ಕೊತ್ತಾಯ, ಭಾಷೆ, ಸಂಸ್ಕೃತಿ, ಪರಂಪರೆ ವಿಭಿನ್ನ ಮತ್ತು ಬೇರೆಯೇ ಎನ್ನುವುದನ್ನು ಸಾಬೀತು ಪಡಿಸಲು ಕಳೆದ 35 ವರ್ಷಗಳಿಂದ ನಡೆಸಿದ ನಿರಂತರ ಕಾರ್ಯಕ್ರಮ ಈಗ ಫಲ ನೀಡಿದೆ. ನಮ್ಮ ಹಲವು ಉದ್ದೇಶಗಳಲ್ಲಿ ಉಡುಗೆ ತೊಡುಗೆ ಕೂಡ ಒಂದಾಗಿದ್ದು, ಅದು ಈಗ ಈಡೇರಿದೆ. ಆದರೆ ನಮ್ಮದೇ ಸಮುದಾಯದವರು ಕೆಂಪುವಸ್ತç ತೊಡುವುದನ್ನು ವಿರೋಧಿಸಿದರು, ಅಪಹಾಸ್ಯ ಮಾಡಿದರು. ಜಾನಪದ ಪರಂಪರೆಯ ಮಹತ್ವವನ್ನು ನಿರ್ಲಕ್ಷಿಸಿದರು. ಆದರೂ ನಾವು ಅತ್ಯಂತ ತಾಳ್ಮೆಯಿಂದ ಕೊಡವ ಆಚಾರ, ವಿಚಾರವನ್ನು ಅನುಸರಿಸಿಕೊಂಡು ಬಂದಿದ್ದೇನೆ. ಸಿಎನ್‌ಸಿ ಸಂಘಟನೆ ಎಲ್ಲಾ ಕೊಡವ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸಿಕೊಂಡು ಬರುತ್ತಿದೆ. ಇದರಲ್ಲಿ ಬಾಳೆ ಬೆಂಗುವ ಆಚರಣೆ (ಬಾಳೆ ಕಡಿಯುವುದು) ಕೂಡ ಒಂದು. ಈ ಆಚರಣೆಯನ್ನು ಮಾಡುವ ಸಂದರ್ಭ ನಮ್ಮವರಿಂದಲೇ ವಿರೋಧ ವ್ಯಕ್ತವಾಯಿತು. ಕೊಡವರ ಸಾಂಪ್ರದಾಯಿಕ ವಸ್ತç ಮತ್ತು ಆಚರಣೆಗಳು ಆದಿಮಸಂಜಾತ ಕೊಡವರ ಹೆಗ್ಗುರುತು ಎನ್ನುವುದನ್ನು ಮನದಟ್ಟು ಮಾಡಿಕೊಡಲು 35 ವರ್ಷಗಳೇ ಬೇಕಾಯಿತು ಎಂದು ಎನ್.ಯು.ನಾಚಪ್ಪ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಪಾದಯಾತ್ರೆಯಲ್ಲಿ ಪಾಲ್ಗೊಂಡ ಬಹುತೇಕ ಎಲ್ಲಾ ಕೊಡವರು ಕೆಂಪು ತಲೆವಸ್ತ್ರ, ಕುಪ್ಯಚೇಲೆ ಮತ್ತು ಕೊಡವ ಪೊಡೆಯ ಉಡುಪಿನಲ್ಲಿ ಕಂಗೊಳಿಸಿದ್ದು, ನನಗೆ ತೃಪ್ತಿ ತಂದಿದೆ. ಕಳೆದ 35 ವರ್ಷಗಳ ಹೋರಾಟದ ನನ್ನ ಉದ್ದೇಶ ಫಲ ಕೊಡುವ ಕಾಲ ಹತ್ತಿರವಾಗುತ್ತಿದೆ ಎನ್ನುವ ವಿಶ್ವಾಸ ಮೂಡಿದೆ. ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿರುವ ಶಕ್ತಿಯ ಕುರಿತು ಅರಿವು ಮೂಡಿಸಿಕೊಂಡಿರುವ ಕೊಡವರು ದೂರದೃಷ್ಟಿತ್ವದ ಸಂವಿಧಾನಾತ್ಮಕವಾಗಿ ಕೊಡವರಿಗೆ ಸಿಗಬೇಕಾದ ಹಕ್ಕುಗಳ ಕುರಿತು ಸಿಎನ್‌ಸಿ ಸಂಘಟನೆ ಆಡಳಿತ ವ್ಯವಸ್ಥೆಯ ಮುಂದಿಡುತ್ತಲೇ ಬರುತ್ತಿರುವ ಬೇಡಿಕೆಗಳ ಕುರಿತು ಜಾಗೃತರಾಗಬೇಕು ಮತ್ತು ಹಕ್ಕುಗಳ ಪ್ರತಿಪಾದನೆಗೆ ಮುಂದಾಗಬೇಕು. ಕೊಡವರು ಸಂವಿಧಾನಬದ್ಧ ಹಕ್ಕೊತ್ತಾಯಗಳನ್ನು ಸಾಧಿಸಲು ನಿರಂತರ ಸಾರ್ವತ್ರಿಕವಾಗಿ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ಸರ್ಕಾರದ ಗಮನ ಸೆಳೆಯಬೇಕು. ಕೊಡವರಿಗೆ ತಮ್ಮ ಹಕ್ಕುಗಳನ್ನು ಮತ್ತು ಹಕ್ಕಿನ ಮಹತ್ವ ಅರಿಯಲು ಪೂಜನೀಯ ಕಾವೇರಿ ಮಾತೆ ಹಾಗೂ ಎಲ್ಲಾ ಒಕ್ಕದ ಗುರುಕಾರೋಣರು ಹರಸಲಿ ಎಂದು ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಪ್ಯಾಕೇಜ್ ನಂಬರ್ 808-ಇಂಪ್ರೂಮೆಂಟ್ಸ್ ಟು ಬೆಂಗಳೂರು-ಜಾಲ್ಸೂರು ರಸ್ತೆ ಎಸ್‍ಎಚ್-85 ರಿಂದ ಸಿಎಚ್…

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.