Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಾರಂಗಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಾರಂಗಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ*

ಫೆಬ್ರವರಿ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ 10 NEWS DESK : ಹಾರಂಗಿ ಅಣೆಕಟ್ಟೆಯ ಸ್ವಾಗತ ಕಮಾನು ಸಂಪೂರ್ಣ ಆಂಗ್ಲಭಾಷೆಯಲ್ಲಿದ್ದು, ಕನ್ನಡ ಭಾಷೆಯಲ್ಲಿ ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರದ ತಾಲ್ಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ನೇತೃತ್ವದಲ್ಲಿ ಜಲಾಶಯದ ಸ್ವಾಗತ ಕಮಾನು ಮುಂಭಾಗ ಜಮಾಯಿಸಿದ ಕರವೇ ಕಾರ್ಯಕರ್ತರು, ಕನ್ನಡ ವಿರೋಧಿಗಳು ಹಾಗೂ ನೀರಾವರಿ ನಿಗಮದ ವಿರುದ್ಧ ಧಿಕ್ಕಾರ ಕೂಗಿದರು. ಕನ್ನಡ ಭಾಷೆ ಬಳಸುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ್, ರಾಜ್ಯ ಸರಕಾರ ಈಗಾಗಲೆ ಕನ್ನಡ ಭಾಷೆಗೆ ಪ್ರಾತಿನಿಧ್ಯ ನೀಡುವಂತೆ ಆದೇಶ ಹೊರಡಿಸಿದೆ. ಆದರೆ ಸರಕಾರದ ಭಾಗವಾಗಿರುವ ನೀರಾವರಿ ನಿಗಮದ ಅಧಿಕಾರಿಗಳು ಇತರರಿಗೆ ಮಾದರಿಯಾಗುವ ಬದಲು ಕನ್ನಡ ವಿರೋಧಿ ನೀತಿ ಅನುಸರಿಸಿದ್ದಾರೆ ಎಂದು ಆರೋಪಿಸಿದರು. ಈಗಾಗಲೆ ನಮ್ಮ ಪದಾಧಿಕಾರಿಗಳು ಕನ್ನಡ ಬಳಕೆಗೆ ಸೂಚನೆ ನೀಡಿದರೂ ಕೂಡ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಮುಂದಿನ 7 ರಿಂದ 15 ದಿನಗಳ ಒಳಗಾಗಿ ಕನ್ನಡ ನಾಮಫಲಕ ಅಳವಡಿಸದಿದ್ದರೆ ನಿಗಮದ ಕಛೇರಿ ಮುಂದೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಕರವೇ ತಾಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಭಾಷೆ ಕಡೆಗಣೆಯಾಗುತ್ತಿರುವುದು ವಿಷಾದದ ಸಂಗತಿ. ಪ್ರತಿ ಬಾರಿ ಕೂಡ ಕರವೇ ಕನ್ನಡ ಭಾಷೆ ಪರವಾಗಿ ಹೋರಾಟ ಹಮ್ಮಿಕೊಳ್ಳಬೇಕಿರುವುದು ದುರಂತದ ಸಂಗತಿ. ಎಷ್ಟೇ ಹೋರಾಟಗಳನ್ನು ಕೈಗೊಂಡರೂ ಕೂಡ ಹಲವು ಕಡೆ ಕನ್ನಡ ಬದಲು ಇಂಗ್ಲೀಷ್ ಗೆ ಹೆಚ್ಚಿನ ಪ್ರಾತಿನಿಧ್ಯ ಕಂಡುಬರುತ್ತಿರುವುದು ಬೇಸರದ ಸಂಗತಿ. ಪ್ರತಿಯೊಬ್ಬರೂ ಕೂಡ ಕನ್ನಡ ಭಾಷೆಗೆ ಆದ್ಯತೆ ನೀಡಬೇಕಿದೆ. ಇಂಗ್ಲೀಷ್ ನಾಮಫಲಕಗಳ ವಿರುದ್ದ ಹೋರಾಟಕ್ಕೆ ಮುಂದಾದ ಕೂಡಲೆ ನಾಮಫಲಕ ಬದಲಾಯಿಸುವ ಬದಲು ಆರಂಭದಲ್ಲೇ ಕನ್ನಡ ಬಳಕೆಗೆ ಮುಂದಾಗಬೇಕಿದೆ ಎಂದು ಅವರು, ಕನ್ನಡ ವಿರೋಧಿಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಎಚ್ಚರಿಸಿದರು. ಕನ್ನಡ ನಾಮಫಲಕ ಅಳವಡಿಸುವಂತೆ ನೀರಾವರಿ ನಿಗಮದ ಸಹಾಯಕ ಅಭಿಯಂತರರಾದ ಸೌಮ್ಯ ಅವರಲ್ಲಿ ಮನವಿ ಮಾಡಿಕೊಳ್ಳಲಾಯಿತು. ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳು ನಾಮಫಲಕ ಅಳವಡಿಕೆ ಸಂದರ್ಭ ಕನ್ನಡಭಾಷೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತಾಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲ್ಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಕೂಡ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಕರವೇ ರಾಜ್ಯ ಸಂಚಾಲಕಿ ದೀಪಾ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಂಧ್ಯಾ ಗಣೇಶ್, ತಾಲೂಕು ಉಪಾಧ್ಯಕ್ಷ ಚಂದ್ರು ಕೆ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಹಾನಗಲ್ ರೂಪಾ ಗಣೇಶ್, ಕಾರ್ಯದರ್ಶಿ ಶೈಲಾ ದೇವಾಂಗ ಸಹ ಕಾರ್ಯದರ್ಶಿ ರಾಣಿ, ಸದಸ್ಯರಾದ ಇಂಚರ, ಆನಂದ್, ಮುರಳಿ, ಕುಮಾರ್, ಮಂಜುನಾಥ್ ರೈ, ರೊನಾಲ್ಡ್, ಯೋಗೇಶ್, ಪರಮೇಶ್ ಮಂಡ್ಯ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಪ್ಯಾಕೇಜ್ ನಂಬರ್ 808-ಇಂಪ್ರೂಮೆಂಟ್ಸ್ ಟು ಬೆಂಗಳೂರು-ಜಾಲ್ಸೂರು ರಸ್ತೆ ಎಸ್‍ಎಚ್-85 ರಿಂದ ಸಿಎಚ್…

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.