


ಮಡಿಕೇರಿ ಫೆ.12 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು, ನಾಪೋಕ್ಲು ಬ್ಲಾಕ್-ಭಾಗಮಂಡಲ ಹೋಬಳಿಯ ಅಯ್ಯಂಗೇರಿಯಲ್ಲಿ ರಸ್ತೆ ಕಾಮಗಾರಿ ಚಾಲನೆ ದೊರೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಅನುದಾನದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದ್ದು, ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಹೇಳಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕಾಂಗ್ರೆಸ್ ಮುಖಂಡರು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.