


ಮಡಿಕೇರಿ ಫೆ.12 NEWS DESK : ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತರಿಗೆ ಕೃಷಿ ಇಲಾಖೆಯ ವತಿಯಿಂದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು. ಕುಶಾಲನಗರ ರೈತ ಸಂಪರ್ಕ ಕೇಂದ್ರದ ಸಭಾಂಗಣದಲ್ಲಿ ಫಲಾನುಭವಿಗಳಿಗೆ ವಿವಿಧ ಯಂತ್ರಗಳನ್ನು ವಿತರಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಗ್ರಾಮೀಣ ಪ್ರದೇಶದ ವಿದ್ಯಾವಂತ ಯುವಕರು ಹುದ್ದೆಯನ್ನು ಅರಸಿ ನಗರ ಪ್ರದೇಶಗಳಲ್ಲಿ ಸುತ್ತುವುದರ ಬದಲು ಕೃಷಿಯಲ್ಲಿ ತೊಡಗುವಂತೆ ಸಲಹೆ ನೀಡಿದರು. ಅಲ್ಲದೇ ಈಗಾಗಲೇ ಅಧುನಿಕ ತಂತ್ರಜ್ಞಾನ ವ್ಯವಸ್ಥೆ ಅಡಿಯಲ್ಲಿ ಬೇಸಾಯ ಮಾಡಲು ಅನುಕೂಲವಾಗುವಂತೆ ವಿವಿಧ ಯಂತ್ರೋಪಕರಣಗಳನ್ನು ಸಂಬಂಧಿಸಿದ ಇಲಾಖೆಯ ವತಿಯಿಂದ ಸಹಾಯಧನ ನೀಡುತ್ತಿರುವುದನ್ನು ರೈತರು ಸದುಪಯೋಗಪಡೆಸಿಕೊಳ್ಳುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಮಡಿಕೇರಿ ಕೃಷಿ ಜಂಟಿ ನಿರ್ದೇಶಕ ಬಿ.ಎಸ್.ಚಂದ್ರಶೇಖರ್, ಉಪ ಕೃಷಿ ನಿರ್ದೇಶಕ ಡಿ.ಎಸ್. ಸೋಮಶೇಖರ್, ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕೆ.ಪಿ.ವೀರಣ್ಣ, ಕೂಡಿಗೆ ಕೃಷಿ ಕ್ಷೇತ್ರದ ಅಧಿಕಾರಿ ಸ್ವರ್ಣ, ಸೇರಿದಂತೆ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತರು ಹಾಜರಿದ್ದರು.