Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಹಿತ್ಯಾಸಕ್ತರ ವೇದಿಕೆಯಿಂದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಸ್ಮರಣೆ : ಮೊಬೈಲ್ ಗಳಿಂದಾಗಿ ಪುಸ್ತಕಗಳು ಮಾಯ : ಸಾಹಿತಿ ಲೀಲಾಕುಮಾರಿ ತೊಡಿಕಾನ‌ ವಿಷಾದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಹಿತ್ಯಾಸಕ್ತರ ವೇದಿಕೆಯಿಂದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಸ್ಮರಣೆ : ಮೊಬೈಲ್ ಗಳಿಂದಾಗಿ ಪುಸ್ತಕಗಳು ಮಾಯ : ಸಾಹಿತಿ ಲೀಲಾಕುಮಾರಿ ತೊಡಿಕಾನ‌ ವಿಷಾದ*

ಫೆಬ್ರವರಿ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೂಡಿಗೆ ಫೆ.12 NEWS DESK :  ಆಧುನಿಕತೆ ಎಲ್ಲೆಡೆ ವಿಜೃಂಭಿಸುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲಿ ನೋಡಿದರಲ್ಲಿ ಟಿವಿ, ಕಂಪ್ಯೂಟರ್ ಹಾಗೂ ಮೊಬೈಲ್ ಗಳಿಂದಾಗಿ ಪುಸ್ತಕಗಳನ್ನು ಓದುವ ಹವ್ಯಾಸವೇ ಮಾಯವಾಗುತ್ತಿದೆ ಎಂದು ಸಾಹಿತಿ ಹಾಗೂ ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಲೀಲಾಕುಮಾರಿ ತೊಡಿಕಾನ ವಿಷಾದಿಸಿದರು. ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಹಾರಂಗಿ ರಸ್ತೆಯ ಮೂಕಾಂಬಿಕಾ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಪುಸ್ತಕಗಳನ್ನು ಓದುವುದರಿಂದ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ನಾಡಿನ ಅಗ್ರಮಾನ್ಯ ಕವಿ, ಸಾಹಿತಿಗಳ, ಶರಣರ ವಿಚಾರಧಾರೆಗಳನ್ನು ಅರಿತು ನಮ್ಮಗಳ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.   ಇದರಿಂದಾಗಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಾಡು ಕಂಡ ಹೆಸರಾಂತ ನವ್ಯ ಕವಿ
ಡಾ. ಶಿವರುದ್ರಪ್ಪ ಅವರು ರಚಿಸಿರುವ ಎದೆ ತುಂಬಿ ಹಾಡುವೆನು, ಕಾಣದಾ ಕಡಲಿಗೆ ಹಂಬಲಿಸಿದೇ ಮನಾ ಇತ್ಯಾದಿ ರಚನೆಗಳು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿವೆ. ಇಂದಿನ ವಿದ್ಯಾರ್ಥಿಗಳೂ ಕೂಡ ಕಥೆ, ಕವನಗಳನ್ನು ಬರೆಯುವ ಮೂಲಕ ಸಾಹಿತ್ಯದ ಅಭಿರುಚಿ ಹೊಂದಬೇಕಿದೆ ಎಂದು ತೊಡಿಕಾನ ಕರೆಕೊಟ್ಟರು. ರಾಷ್ಟ್ರ ಕವಿ ಡಾ.ಜಿ.ಎಸ್.ಶಿವರುದ್ರಪ್ಪ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಮೂಕಾಂಬಿಕಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಮಾತನಾಡಿ, ಜಗದ ಕವಿ – ಯುಗದ ಕವಿ ಕುವೆಂಪು ಮನೆತನದ ಸೊಸೆಯಾದ ನನಗೆ ಜಿ.ಪಂ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಡಾ.ಜಿ.ಎಸ್.ಎಸ್ ಅವರನ್ನು ಖುದ್ದು ಭೇಟಿ ಮಾಡಿ ಗಡಿ ನಾಡು ಕೊಡಗಿನ ವಿಚಾರಗಳನ್ನು ಹಂಚಿಕೊಂಡದ್ದನ್ನು ನೆನಪು ಮಾಡಿಕೊಂಡರಲ್ಲದೇ, ಸಾಹಿತ್ಯ ಕ್ಷೇತ್ರದ ಎಲ್ಲಾ ದಿಗ್ಗಜರನ್ನು ಕಾಲ ಕಾಲಕ್ಕೆ ಸ್ಮರಣೆ ಮಾಡುತ್ತಾ ಇಂದಿನ ವಿದ್ಯಾರ್ಥಿಗಳಿಗೆ ಕವಿ ಸಾಹಿತಿಗಳ ಪರಿಚಯ ಮಾಡುತ್ತಿರುವ ಸಾಹಿತ್ಯಾಸಕ್ತರ ವೇದಿಕೆಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕನ್ನಡ ಅಧ್ಯಾಪಕ ಕೆ.ಆರ್.ರಮೇಶ್ ಮಾತನಾಡಿ, ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಮೂರನೇ ರಾಷ್ಟ್ರಕವಿ ಬಿರುದಿಗೆ ಭಾಜನರಾದ ಡಾ. ಜಿಎಸ್ಎಸ್, ಕುವೆಂಪು, ಗೋವಿಂದ ಪೈ ಮೊದಲಾದ ಕವಿ ಸಾಹಿತಿಗಳ ಪುಸ್ತಕಗಳನ್ನು ಹೆಚ್ಚಾಗಿ ಓದುವ ಮೂಲಕ‌ ಸಾಹಿತ್ಯ ಜ್ಞಾನ ಹೆಚ್ಚಿಸಿಕೊಂಡರೆ ಶಿಕ್ಷಣವೂ ರುಚಿಸುತ್ತದೆ ಎಂದರು. ಮೂಕಾಂಬಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸೂದನ ಗೋಪಾಲ್  ಶಿವರುದ್ರಪ್ಪ ವಿರಚಿತ ಭಾವಗೀತೆಗಳನ್ನು ಹಾಡಿದರು.  ಮೂಕಾಂಬಿಕಾ ಪಿಯು ಕಾಲೇಜು ಪ್ರಾಂಶುಪಾಲ ಪ್ರಸನ್ನ, ಉಪನ್ಯಾಸಕಿ ಶ್ರೇಣಿ, ಹೇಮಂತ್, ಶಿಕ್ಷಕ ಕಾಂತರಾಜು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.