
ಪೊನ್ನಂಪೇಟೆ ಫೆ.12 NEWS DESK : ಪೊನ್ನಂಪೇಟೆ ವ್ಯಾಪ್ತಿಯ ಬಿರುನಾಣಿ ಗ್ರಾಮದ ಅಣ್ಣಳಮಾಡ ಕುಟುಂಬಸ್ಥರ ಐನ್ ಮನೆ ಅಭಿವೃದ್ಧಿಗೆ ಹಾಗೂ ಐನ್ ಮನೆಗೆ ತೆರಳುವ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಐನ್ ಮನೆ ಮುಖ್ಯಸ್ಥರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.









