ಮಡಿಕೇರಿ ಫೆ.13 NEWS DESK : ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುರಕ್ಷಿತ ಅಂತರ್ಜಾಲ ದಿನ (safer internet day) ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಉದ್ಘಾಟಿಸಿ ಮಾತನಾಡಿ, ಸುರಕ್ಷಿತ ಅಂತರ್ಜಾಲ ದಿನದ ಬಗ್ಗೆ ಮಾಹಿತಿಯನ್ನು ನೀಡಿದರು. ಎನ್‍ಐಸಿ ಅಧಿಕಾರಿಗಳಾದ ಸಿಂಧೂರ ತಳವಾರ ಅವರು ಸುರಕ್ಷಿತ ಇಂಟರ್ನೆಟ್ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದರು. ಜಿಲ್ಲೆಯ ಅಧಿಕಾರಿಗಳು ಹಾಗೂ ಆಡಳಿತ ಸಿಬ್ಬಂದಿಗಳು ಮತ್ತು ಎನ್‍ಐಸಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.











