ಮಡಿಕೇರಿ ಫೆ.13 NEWS DESK : ಪೊನ್ನಂಪೇಟೆ ತಾಲ್ಲೂಕು ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿಯಾರ ಗಿರೀಶ್ ಕುಟುಂಬಸ್ಥರ ಮನೆಗೆ ಹೋಗುವ ತೋಡಿಗೆ ಕಾಲು ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಕಣಿಯಾರ ಕುಟುಂಬಸ್ಥರು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಸ್ಥಳದಲ್ಲಿ ಉಪಸ್ಥಿತರಿದ್ದ ಕುಟುಂಬಸ್ಥರು ಶಾಸಕರಿಗೆ ಧನ್ಯವಾದಗಳು ಅರ್ಪಿಸಿದರು. ಮಳೆಗಾಲದಲ್ಲಿ ನೀರಿನ ರಭಸ ಹೆಚ್ಚಾಗಿದ್ದು, ಈ ಭಾಗದ ನಿವಾಸಿಗಳಿಗೆ ತಮ್ಮ ಮನೆಗಳಿಗೆ ತೆರಳಲು ಅಪಾಯಕಾರಿ ಬಿದಿರಿನ ಪಾಲಗಳನ್ನು ಬಳಸಿ ಹೋಗುವ ಸನ್ನಿವೇಶ ನಿರ್ಮಾಣವಾಗಿತ್ತು. ಈ ಬಗ್ಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಶಾಸಕರು ಮಂಜೂರು ಮಾಡಿದ್ದರು.











