![](https://newsdeskkannada.com/wp-content/uploads/2025/02/Z-ND-ADVT-16.jpg)
![](https://newsdeskkannada.com/wp-content/uploads/2025/02/Z-ADVT-TEACHERS-10.jpg)
![](https://newsdeskkannada.com/wp-content/uploads/2025/02/Z-SRI-SAI-INSURENCE-8.jpg)
ಮಡಿಕೇರಿ ಫೆ.14 NEWS DESK : ಕೊಡಗು ಜಿಲ್ಲಾ ನಿವೃತ್ತ ಪೊಲೀಸರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಫೆ.18ರಂದು ನಗರದ ಮೈತ್ರಿ ಪೊಲೀಸ್ ಭವನದಲ್ಲಿ ನಡೆಯಲಿದ್ದು, ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಎಂಬತ್ತು ವರ್ಷ ಮೀರಿದ ಹಿರಿಯರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭೆಯನ್ನು ಅಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಸಂಘದ ಗೌರವಾಧ್ಯಕ್ಷರಾದ ಎಂ.ಕೆ.ಅಪ್ಪಯ್ಯ ಅವರು ಮಾತನಾಡಿ, ಮಹಾಸಭೆಯಲ್ಲಿ ಸಂಘದಲ್ಲಿರುವ 80 ವರ್ಷ ಮೇಲ್ಪಟ್ಟ ಹಿರಿಯರನ್ನು ಸನ್ಮಾನಿಸಲಾಗುತ್ತದೆ. ಇದರೊಂದಿಗೆ ವೀರಪ್ಪನ್ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕೊಡಗಿನ ಮಣವಟ್ಟೀರ ಪೊನ್ನಪ್ಪ ಅವರ ಜ್ಞಾಪಕಾರ್ಥ ಪೊಲೀಸ್ ಅಧಿಕಾರಿ ಶಂಕರಿ ಬಿದರಿ ಅವರು ಸಂಘಕ್ಕೆ ನೀಡಿರುವ 1 ಲಕ್ಷ ರೂ. ಮತ್ತು ಹಿರಿಯರಾದ ಪಿ.ಕೆ.ರಾವ್ ಅವರು ತಮ್ಮ ತಾಯಿಯ ಸ್ಮರಣಾರ್ಥ ನೀಡಿರುವ 1 ಲಕ್ಷ ರೂ. ನಿಧಿಯಲ್ಲಿ ಬರುವ ಬಡ್ಡಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.80ಕ್ಕಿಂತ ಹೆಚ್ಚಿನ ಅಂಕ ಪಡೆದ ಸದಸ್ಯರ ಮಕ್ಕಳ ಪ್ರತಿಭಾ ಪುರಸ್ಕಾರ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯಾಧ್ಯಕ್ಷರಾದ ಬಿ.ಆರ್.ಲಿಂಗಪ್ಪ, ಕಾರ್ಯದರ್ಶಿ ಅಚ್ಚುತನ್ ನಾಯರ್, ಸಹ ಕಾರ್ಯದರ್ಶಿ ಜಂಟಿ ಕಾರ್ಯದರ್ಶಿ ಹಾಗೂ ಖಜಾಂಚಿ ಬಿ.ಎಂ.ಭೀಮಯ್ಯ ಉಪಸ್ಥಿತರಿದ್ದರು.