![](https://newsdeskkannada.com/wp-content/uploads/2025/02/Z-ND-ADVT-16.jpg)
![](https://newsdeskkannada.com/wp-content/uploads/2025/02/Z-ADVT-TEACHERS-10.jpg)
![](https://newsdeskkannada.com/wp-content/uploads/2025/02/Z-SRI-SAI-INSURENCE-8.jpg)
ಮಡಿಕೇರಿ ಫೆ.14 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಮಡಿಕೇರಿ ತಾಲೂಕು ಎಡಪಾಲದಲ್ಲಿ ನೂತನ ರಸ್ತೆ ಕಾಮಗಾರಿಗೆ
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭ ಈ ಭಾಗದಲ್ಲಿ ಶಾಸಕರ ಅನುದಾನದಲ್ಲಿ ಪೂರ್ಣಗೊಂಡಿದ್ದ ನೂತನ ರಸ್ತೆಯನ್ನು ಲೋಕಾರ್ಪಣೆ ಮಾಡಿದರು. ಭೂಮಿ ಪೂಜೆ ಬಳಿಕ ಮಾತನಾಡಿದ ಶಾಸಕರು, ಎಡಪಾಲ ಭಾಗದ ಜನರು ತನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಕಾರ್ಯಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದರು. ಬಳಿಕ ಎಡಪಾಲ ಬಳಿ ಇರುವ ಸೇತುವೆಯನ್ನು ವೀಕ್ಷಣೆ ಮಾಡಿದರು. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು, ಸ್ಥಳೀಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.