Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯಡೂರಿನಲ್ಲಿ ಗಮನ ಸೆಳೆದ ಜಾನಪದ ಕ್ರೀಡಾಕೂಟ : ಜಾನಪದ ಪ್ರತಿಭೆ ಪ್ರದರ್ಶಕ್ಕೆ ಸೂಕ್ತ ವೇದಿಕೆ ಅಗತ್ಯ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯಡೂರಿನಲ್ಲಿ ಗಮನ ಸೆಳೆದ ಜಾನಪದ ಕ್ರೀಡಾಕೂಟ : ಜಾನಪದ ಪ್ರತಿಭೆ ಪ್ರದರ್ಶಕ್ಕೆ ಸೂಕ್ತ ವೇದಿಕೆ ಅಗತ್ಯ : ಶಾಸಕ ಡಾ.ಮಂತರ್ ಗೌಡ*

ಫೆಬ್ರವರಿ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಫೆ.15 NEWS DESK : ಜಾನಪದ ಪ್ರತಿಭೆಗಳು ಎಲೆಮರೆ ಕಾಯಿಯಂತಾಗಬಾರದು ಅವರ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಡಾ.ಮಂತರ್‍ಗೌಡ ಅಭಿಪ್ರಾಯಿಸಿದರು. ಕೊಡಗು ಜಿಲ್ಲಾ ಜಾನಪದ ಪರಿಷತ್ ಸೋಮವಾರಪೇಟೆ ಘಟಕ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯಡೂರು ಗ್ರಾಮದ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಜಾನಪದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಜಾನಪದ ಕಲೆ ಮತ್ತು ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗ್ರಾಮೀಣ ಹಾಗು ನಗರ ಪ್ರದೇಶಗಳಲ್ಲಿ ಜಾನಪದ ಕ್ರೀಡಾಕೂಟಗಳು ನಡೆಯುತ್ತಿರಬೇಕು. ಪ್ರತಿಯೊಬ್ಬರು ಭಾಗವಹಿಸಬೇಕು ಎಂದರು. ಗ್ರಾಮೀಣ ಭಾಗದಲ್ಲಿ ಮಾತ್ರ ಜಾನಪದ ಕಲೆ ಮತ್ತು ಕ್ರೀಡೆಯಲ್ಲಿ ಮಕ್ಕಳು ತೊಡಗಿಸಿಕೊಳ್ಳುತ್ತಿದ್ದಾರೆ. ಪ್ರತಿ ಶಾಲಾ ಕಾಲೇಜಿನಲ್ಲಿ ಜಾನಪದ ಕ್ರೀಡಾಕೂಟಗಳನ್ನು ಅಯೋಜಿಸಬೇಕು ಎಂದು ಹೇಳಿದರು. ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಅನಂತಶಯನ ಮಾತನಾಡಿ, ಜಾನಪದ ಸೊಗಡಿನ ಆಟಗಳು ಜನ ಮಾನಸದಿಂದ ದೂರ ಸರಿಯದಂತೆ ಮಾಡುವುದೆ ಜಾನಪದ ಪರಿಷತ್‍ನ ಕಾಯಕವಾಗಿದೆ ಎಂದು ಹೇಳಿದರು. ಜಾನಪದ ಆಟಗಳಲ್ಲಿ ನಮ್ಮ ನಾಡಿನ ಸಾಂಸ್ಕøತಿಕ, ಸಾಮಾಜಿಕ ಆಂಶಗಳನ್ನು ಕಾಣಬಹುದಾಗಿದೆ. ಮನುಷ್ಯ ಸಂಬಂಧದ ಸಾಮರಸ್ಯವನ್ನು ಹೆಚ್ಚಿಸುವ ಆಟಗಳು ಮರೆಯಾಗುತ್ತಿರುವುದು ವಿಷಾಧನೀಯ ಎಂದರು. ಜಾನಪದದ ಅರ್ಥ, ವಿಚಾರ, ಸಾಹಿತ್ಯವನ್ನು ಅರಿಯಬೇಕು, ಕಲಿಯಬೇಕು, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು ಹೇಳಿದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಮಾತನಾಡಿ, ಗ್ರಾಮೀಣ ಕ್ರೀಡೆಗಳನ್ನು ಜೀವಂತವಾಗಿಡಬೇಕೆಂಬ ಸದುದ್ದೇಶದಿಂದ ಇಂತಹ ಕ್ರೀಡಾಕೂಟಗಳನ್ನು ಪ್ರತಿವರ್ಷ ನಡೆಸಲಾಗುತ್ತಿದೆ ಎಂದು ಹೇಳಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಎಚ್.ಎನ್.ತಂಗಮ್ಮ, ಸುಶೀಲಾ ಹಾನಗಲ್, ರೇಣುಕ ವೆಂಕಟೇಶ್, ಯಡೂರು ಮಲ್ಲಪ್ಪ, ಅರುಣ್ ಕೊತ್ನಳ್ಳಿ, ವಿಸ್ಮಯಿ, ಡಾ.ಮಂತರ್‍ಗೌಡ ಅವರುಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಪರಿಷತ್‍ನ ತಾಲ್ಲೂಕು ಅಧ್ಯಕ್ಷ ಕೆ.ಎ.ಪ್ರಕಾಶ್, ಪ್ರಾಂಶುಪಾಲರಾದ ಡಾ.ಹರ್ಷ, ಜಯವೀರಮಾತೆ ದೇವಾಲಯದ ಧರ್ಮಗುರು ಅವಿನಾಶ್, ಹಾನ್‍ಗಲ್ ಗ್ರಾಮ ಪಂಚಾಯಿತಿ ಸದಸ್ಯ ಡಿ.ಎಸ್.ಸುರೇಶ್, ಪರಿಷತ್‍ನ ಜಿಲ್ಲಾ ಕಾರ್ಯದರ್ಶಿ ಮುನೀರ್ ಆಹಮ್ಮದ್ ಇದ್ದರು. ಪರಿಷತ್‍ನ ಕವಿತ ವಿರೂಪಾಕ್ಷ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ಬುಕುರಿ, ಚಿನ್ನದಾಂಡು, ಕಾಳುಹೆಕ್ಕುವುದು, ಕಪ್ಪೆ ಕುಪ್ಪಳಿಸುವುದು, ಲಗೋರಿ, ಕುಂಟಬಿಲ್ಲೆ ಆಟಗಳನ್ನು ಆಡಿ ಸಂಭ್ರಮಿಸಿದರು. ಸಾರ್ವಜನಿಕರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಸಂತೋಷಪಟ್ಟರು. ಶಾಸಕ ಡಾ.ಮಂತರ್‍ಗೌಡ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಮಡಿಕೆ ಒಡೆದು ಪ್ರೇಕ್ಷಕರನ್ನು ರಂಜಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.