ಮಡಿಕೇರಿ NEWS DESK ಫೆ.15 : ಶನಿವಾರಸಂತೆಯಲ್ಲಿ ಸಾಲದ ಬಾಧೆಯಿಂದ ಆತ್ಮಹತ್ಯೆಗೆ ಶರಣಾದ ಹಸೀನಾ ಅವರ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಇಂದು ಭೇಟಿ ನೀಡಿದರು. ಕುಟುಂಬದ ಸದಸ್ಯರುಗಳಿಗೆ ಸಾಂತ್ವನ ಹೇಳಿದ ಅವರು ಘಟನೆಯ ಮಾಹಿತಿ ಪಡೆದರು. ನಂತರ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ವೈಯಕ್ತಿಕವಾಗಿ ಧನ ಸಹಾಯ ಮಾಡಿದರು. ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಕ್ಮಲ್ ಪಾಷಾ, ಸೋಮವಾರಪೇಟೆ ತಾಲ್ಲೂಕು ಕೆಡಿಪಿ ಸದಸ್ಯ ಶರತ್ ಶೇಖರ್, ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಯು.ಕಿರಣ್, ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.










