

ಮಡಿಕೇರಿ NEWS DESK ಫೆ.16 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ತುರ್ತು ಔಷಧೀಯ ವಿಭಾಗದ ಪ್ರಾಧ್ಯಾಪಕರಾಗಿ ಕರ್ನಾಟಕ ಸರಕಾರದಿಂದ ನೇಮಕಗೊಂಡಿರುವ ಕೊಡಗು ಜಿಲ್ಲಾ ಸಂಸ್ಕೃತಿ ಸಿರಿ ಬಳಗ ಮತ್ತು ಟ್ರಸ್ಟ್ ನ ಗೌರವ ಅಧ್ಯಕ್ಷರು ಹಾಗೂ ಸಲಹೆಗಾರರಾಗಿರುವ ಮಡಿಕೇರಿಯ ಖ್ಯಾತ ಇ.ಎನ್.ಟಿ ವೈದ್ಯ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ಅವರನ್ನು ಬಳಗದ ಪದಾಧಿಕಾರಿಗಳು ಸನ್ಮಾನಿಸಿ, ಅಭಿನಂದಿಸಿ ಗೌರವಿಸಿದರು. ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಮೋಹನ್ ಅಪ್ಪಾಜಿ ಅವರು ಮುಂದಿನ ದಿನಗಳಲ್ಲಿ ಮಡಿಕೇರಿಯ ಜಿಲ್ಲಾಸ್ಪತ್ರೆಯನ್ನು ರಾಜ್ಯದಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿಸುವ ಗುರಿ ಹೊಂದಿದ್ದು, ಇದಕ್ಕೆ ಸರ್ವರೂ ಕೈಜೋಡಿಸಬೇಕೆಂದು ಮನವಿ ಮಾಡಿದರು. ಕೊಡಗು ಜಿಲ್ಲಾ ಸಂಸ್ಕೃತಿ ಸಿರಿ ಬಳಗ ಮತ್ತು ಟ್ರಸ್ಟ್ ನ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ಉಪಾಧ್ಯಕ್ಷರಾದ ಕೋಲೆಯಂಡ ನಿಶಾ ಮೋಹನ್, ಕಾರ್ಯದರ್ಶಿ ಕೇಚಂಡ ಸುನೀತಾ ಗಣೇಶ್, ಖಜಾಂಚಿ ಕೂಡಂಡ ಸೀಮಾ ಕಾವೇರಪ್ಪ, ಟ್ರಸ್ಟಿ ಕೆ.ಎಂ.ಬಿ ಗಣೇಶ್, ಈರಮಂಡ ವಿಜಯ್ ಉತ್ತಯ್ಯ, ಬಳಗದ ಸದಸ್ಯರಾದ ಮಂಜುಳಾ ಶಿವಕುಮಾರ್, ಡೆನ್ನಿ ಬರೋಸ್, ಸರಿತಾ ಅಯ್ಯಪ್ಪ, ಸೋನಾ ಪ್ರೀತು, ಜಾನ್ಸನ್ ಪಿಂಟೋ, ಸುಶೀಲ, ಗಿಲ್ಬರ್ಟ್ ಲೋಬೊ, ಕೃಷ್ಣ ರಾಜು ಎಂ.ಪಿ, ಅನಿಲ್ ಕೃಷ್ಣನ್, ಕಾಂಡಂಡ ಪ್ರಣೀತಿ, ರಾಧಾ ಶೇಖರ್, ಜಾನ್ಸನ್ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.