Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಸಂತ ಸೇವಾಲಾಲ್ ಸಿದ್ಧಾಂತ ಮತ್ತು ವಿಚಾರಧಾರೆ ತಿಳಿದುಕೊಳ್ಳಿ : ವೆಂಕಟನಾಯಕ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಸಂತ ಸೇವಾಲಾಲ್ ಸಿದ್ಧಾಂತ ಮತ್ತು ವಿಚಾರಧಾರೆ ತಿಳಿದುಕೊಳ್ಳಿ : ವೆಂಕಟನಾಯಕ್ ಸಲಹೆ*

ಫೆಬ್ರವರಿ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.17 NEWS DESK : ಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಶಿಕ್ಷಕರಾದ ವೆಂಕಟ ನಾಯಕ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ  ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಲೆಮಾರಿ ಜನ ಸಮುದಾಯದ ಬಂಜಾರ, ಲಂಬಾಣಿ, ಲಮಾಣಿ, ಸುಗಾಲಿ, ಸುಕಾಲಿ ಗೋರ್, ಸೋನಾರ್, ಲೋಹಾರ್, ಬಾಜೀಗರ್ ಮತ್ತಿತರ ಅನೇಕ ಉಪನಾಮಗಳಿಂದ ಗುರುತಿಸಲ್ಪಡುವ ಬಂಜಾರರು ಮೂಲತಃ ದಿನಸಿ ಮತ್ತು ಲವಣದ ವ್ಯಾಪಾರಿಯಾಗಿದ್ದರು ಎಂದು ಅವರು ವೆಂಕಟ್ ನಾಯಕ್ ಅವರು ವಿವರಿಸಿದರು. ಲಂಬಾಣಿ, ಬಂಜಾರ ಸಮಾಜ ಬಗ್ಗೆ ಮಹಾಭಾರತದಲ್ಲಿಯೇ ಉಲ್ಲೇಖವಾಗಿರುವುದನ್ನು ಕಾಣಬಹುದಾಗಿದ್ದು, ಸುಮಾರು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇದೆ ಎಂದು ತಿಳಿಸಿದರು. ಸಂತ ಸೇವಾಲಾಲ್ ಅವರು 1739 ಫೆಬ್ರವರಿ 15 ರಂದು ಸೂರಗೊಂಡನ ಕೊಪ್ಪದಲ್ಲಿ ಜನಿಸಿದರೆಂದು ಹೇಳಲಾಗುತ್ತದೆ. ಗೋವುಗಳ ಸಂರಕ್ಷಣೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಅವರು ನುಡಿದರು. ಲಂಬಾಣಿ ಭಾಷೆ, ಸಂಸ್ಕøತಿ ಆಚಾರ-ವಿಚಾರ ಉಡುಗೆ-ತೊಡುಗೆ ವೈಶಿಷ್ಟ್ಯತೆಯಿಂದ ಕೂಡಿದೆ. ಸಮಾಜದ ಮುಖ್ಯವಾಹಿನಿಯಿಂದ ಬಂಜಾರ ಸಮಾಜವು ಇನ್ನೂ ಸಹ ದೂರವಿದ್ದು, ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಸಂತ ಸೇವಾಲಾಲ್ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ತಾವು ಓದಬೇಕು, ಇತರರನ್ನು ಓದಿಸಬೇಕು ಎಂಬ ಆಶಯ ಹೊಂದಿದ್ದರು ಎಂದು ವೆಂಕಟ ನಾಯಕ್ ಅವರು ತಿಳಿಸಿದರು. ಬಂಜಾರ, ಲಂಬಾಣಿ ಸಮಾಜಕ್ಕೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಮಹಾರಾಷ್ಟ್ರ ಮತ್ತಿತರ ರಾಜ್ಯಗಳು ಸೇರಿದಂತೆ, ದೇಶ ವಿದೇಶಗಳಲ್ಲಿ ಲಂಬಾಣಿ ಸಮಾಜದವರು ಇದ್ದಾರೆ ಎಂದರು. ಪ್ರತಿ ತಾಂಡಗಳಲ್ಲಿ ಮನುಷ್ಯನಾಗಿ ಜನಿಸಿ ಒಂದು ಜನಾಂಗದ ಏಳಿಗೆಗಾಗಿ ಸಂತ ಸೇವಾಲಾಲ್ ಸಿದ್ಧಾಂತ ಮತ್ತು ವಿಚಾರಗಳು ಪ್ರತಿಯೊಬ್ಬರಿಗೂ ತಿಳಿಯುವಂತಾಗಬೇಕು ಎಂದು ಹೇಳಿದರು.ಪ್ರತಿ ಎರಡು ವರ್ಷಗಳಿಗೆ ಒಮ್ಮೆ ಗೋಧಿ ಸಸಿಯನ್ನು ಬೆಳೆದು ‘ತೀಜ್ ಹಬ್ಬ’ವೆಂದು ಪ್ರಸ್ತುತಗೊಂಡಿರುವ (ಮನೆ ಮನೆ ಪೂಜೆ) ಘರೆ ಘರೇರ್ ಹಬ್ಬ ಆಚರಿಸಿದಾಗ ಕನಿಷ್ಠ ಒಂದೆರಡು ಕುರಿಗಳನ್ನು ಪ್ರತಿಯೊಬ್ಬ ಬಂಜಾರ ಕುಟುಂಬ ಮರಿಯಮ್ಮಗೆ ಬಲಿಕೊಟ್ಟು ಬೀಗರಿಗೆ ಉಣಿಸುವುದು ವಾಡಿಕೆ. ಈ ಹಬ್ಬ ಬಂತೆಂದರೆ ಸುತ್ತಲ ಹಳ್ಳಿಗಳ ಭಲೇ ಖುಷಿ ಪಡುತ್ತಾರೆ ಎಂದು ವಿವರಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯ ನಿರ್ದೇಶಕರಾದ ಕುಮಾರ ಅವರು ಮಾತನಾಡಿದರು, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ. ಕವಿತಾ, ಗಣಿ ಮತ್ತು ಭೂವಿಜ್ಮಾನ ಇಲಾಖೆಯ ಹಿರಿಯ ಭೂವಿಜ್ಞಾನಿ ನಾಗರಾಜು, ಬಿಸಿಎಂ ಇಲಾಖೆಯ ತಾಲೂಕು ಅಧಿಕಾರಿ ಮೋಹನ್ ಕುಮಾರ್, ಮಣಜೂರು ಮಂಜುನಾಥ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.