Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ : ತಾಜ್ ಕುಶಾಲನಗರ ಚಾಂಪಿಯನ್, ಫ್ರೀಡಮ್ ಬಾಯ್ಸ್ ಹುಂಡಿ ರನ್ನರ್ಸ್* 
ಇತ್ತೀಚಿನ ಸುದ್ದಿಗಳು

*ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ : ತಾಜ್ ಕುಶಾಲನಗರ ಚಾಂಪಿಯನ್, ಫ್ರೀಡಮ್ ಬಾಯ್ಸ್ ಹುಂಡಿ ರನ್ನರ್ಸ್* 

February 17, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.17 NEWS DESK :  ಚಿಲ್ ಬಾಯ್ಸ್ ಮಡಿಕೇರಿ ಹಾಗೂ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಇವರ ಆಶ್ರಯದಲ್ಲಿ, ಕಳೆದ ಒಂದು ವಾರಗಳಿಂದ ಮಡಿಕೇರಿ ನಗರದ ಕೆ.ಎಸ್ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ 20ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಶಾಲನಗರ ತಾಜ್ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದೆ. ರನ್ನರ್ಸ್ ಪ್ರಶಸ್ತಿಯನ್ನು ಫ್ರೀಡಮ್ ಬಾಯ್ಸ್ ಹುಂಡಿ ತಂಡವು ಪಡೆದುಕೊಂಡಿತು. ಫೈನಲ್ ಪಂದ್ಯದಲ್ಲಿ ಮೊದಲು ಟಾಸ್ ಸೋತು ಬ್ಯಾಟ್ ಮಾಡಿದ ತಾಜ್ ಕುಶಾಲನಗರ ತಂಡವು ನಿಗದಿತ ಆರು ಓವರ್ ಗಳಲ್ಲಿ 49 ರನ್ ಗಳಿಸಿತು. 50 ರನ್ ಗಳ ಗುರಿ ಬೆನ್ನಟ್ಟಿದ ಫ್ರೀಡಮ್ ಬಾಯ್ಸ್ ಹುಂಡಿ ತಂಡವು ಕೊನೆಯ ಕ್ಷಣದವರೆಗೂ ಹೋರಾಟ ನಡೆಸಿದರು ಕೂಡ,ಫ್ರೀಡಮ್ ಬಾಯ್ಸ್ ಹುಂಡಿ 40 ರನ್ ಗಳಿಸಲಷ್ಟೇ ಶಕ್ತರಾದರು. ಅಂತಿಮವಾಗಿ ತಾಜ್ ಕುಶಾಲನಗರ ತಂಡವು 09 ರನ್ ಗಳ ಅಂತರದಿಂದ ಗೆಲುವು ಸಾಧಿಸಿ, 20ನೇ ವರ್ಷದ ಮುಸ್ಲಿಂ ಕಪ್ ಕ್ರಿಕೆಟ್ ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿತು. ಫೈನಲ್ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ತಾಜ್ ಕುಶಾಲನಗರ ತಂಡದ ತಶ್ರೀಫ್ ಪಡೆದುಕೊಂಡರು. ಇದಕ್ಕೂ ‌ಮೊದಲು ನಡೆದ ಪ್ರಥಮ ಸೆಮಿಫೈನಲ್‌ ಪಂದ್ಯವು ಫ್ರೀಡಮ್ ಬಾಯ್ಸ್ ಹುಂಡಿ ಹಾಗೂ ಕೈವೈಸಿಸಿ ತಂಡಗಳ ನಡುವೆ ನಡೆಯಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೆವೈಸಿಸಿ ತಂಡವು ನಿಗದಿತ ಆರು ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 26 ರನ್ ಗಳಿಸಿದರು. ಫ್ರೀಡಮ್ ಬಾಯ್ಸ್ ಹುಂಡಿ ತಂಡದ ನಾಯಕ ರಿಯಾಸ್ (ಇಯ್ಯಾ) ಅವರ 20 ರನ್ ಗಳ ನೆರವಿನಿಂದ 1.1 ಓವರ್ ಗಳಲ್ಲಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತು.ಮೊದಲನೇ ಸೆಮಿಫೈನಲ್ ಪಂದ್ಯದಲ್ಲಿ ಫ್ರೀಡಮ್ ಬಾಯ್ಸ್ ಹುಂಡಿ ತಂಡದ ರಿಯಾಸ್ ಹುಂಡಿ ಪಡೆದುಕೊಂಡರು. ಎರಡನೇ ಸೆಮಿಫೈನಲ್ ಪಂದ್ಯವು ಆ್ಯಶಸ್ ಗೋಣಿಕೊಪ್ಪ ಹಾಗೂ ತಾಜ್ ಕುಶಾಲನಗರ ತಂಡಗಳ ನಡುವೆ ನಡೆಯಿತು. ನಿಗದಿತ ಆರು ಓವರ್ ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 43 ರನ್ ಗಳಿಸಿದರು. 44 ರನ್ ಗಳ ಗುರಿಯನ್ನು ಬೆನ್ನಟ್ಟಿದ ಆ್ಯಶಸ್ ಗೋಣಿಕೊಪ್ಪ ತಂಡದ ತನ್ವೀರ್ ಚಿನ್ನು ಅವರ ಅಮೋಘವಾದ ಬ್ಯಾಟ್ ಮೂಲಕ ತಂಡವು ಸಮಬಲ ಸಾಧಿಸಿತು. ಸೆಮಿಫೈನಲ್ ಪಂದ್ಯವು ಡ್ರಾ ಆದ ಕಾರಣದಿಂದ ಸೂಪರ್ ಓವರ್ ನಡೆಯಿತು. ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಆ್ಯಶಸ್ ಗೋಣಿಕೊಪ್ಪ ತಂಡವು ಎರಡು ವಿಕೆಟ್ ಕಳೆದುಕೊಂಡು 8 ರನ್ ಗಳಿಸಿತು. ಸೂಪರ್ ಓವರ್ ನಲ್ಲಿ ಗೆಲುವು ಸಾಧಿಸಿ ತಾಜ್ ಕುಶಾಲನಗರ ತಂಡವು ಫೈನಲ್ ಪ್ರವೇಶಿಸಿತು. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ತಾಜ್ ಕುಶಾಲನಗರ ತಂಡದ ರಜಾಕ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮೂರನೇ ಸ್ಥಾನಕ್ಕಾಗಿ ನಡೆದ ಆ್ಯಶಸ್ ಗೋಣಿಕೊಪ್ಪ ಹಾಗೂ ಕೆವೈಸಿಸಿ ಕಡಂಗ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆ್ಯಶಸ್ ತಂಡವು ನಿಗದಿತ ನಾಲ್ಕು ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 43 ರನ್ ಗಳಿಸಿದರು. 44 ರನ್ ಗಳ ಗುರಿಯನ್ನು ಬೆನ್ನಟ್ಟಿದ ಕೆವೈಸಿಸಿ ತಂಡವು ಯಾವುದೇ ವಿಕೆಟ್ ನಷ್ಟವಿಲ್ಲದೆ ಮೂರನೇ ಓವರ್ ನಲ್ಲಿ ಗುರಿ ತಲುಪಿ ಮೂರನೇ ಸ್ಥಾನವನ್ನು ಕೆವೈಸಿಸಿ ಕಡಂಗ ತಂಡ ಪಡೆದುಕೊಂಡಿತು. ನಾಲ್ಕನೇ ಸ್ಥಾನಕ್ಕೆ ಆ್ಯಶಸ್ ಗೋಣಿಕೊಪ್ಪ ತಂಡ ತೃಪ್ತಿಪಟ್ಟುಕೊಂಡಿತ್ತು.

ವೈಯುಕ್ತಿಕ ಬಹುಮಾನಗಳು: ಬೆಸ್ಟ್ ಟೀಮ್ ಹಾರ್ಡ್ ಹಿಟ್ಟರ್ ಕಾಗಡಿಕಟ್ಟೆ, ಮ್ಯಾನ್ ಆಫ್ ದಿ-ಸೀರಿಯಸ್ ಫ್ರೀಡಮ್ ಬಾಯ್ಸ್ ತಂಡದ ರಿಯಾಸ್ ಇಯ್ಯಾ, ಬೆಸ್ಟ್ ಬ್ಯಾಟ್ಸ್‌ಮನ್ ತಾಜ್ ತಂಡದ ಅಲೀಮ್ ಕುಶಾಲನಗರ, ಬೆಸ್ಟ್ ಬೌಲರ್ ಫ್ರೀಡಮ್ ಬಾಯ್ಸ್ ತಂಡದ ಶಂಸು ಹುಂಡಿ, ಲೆಜೆಂಡ್ ಪ್ಲೇಯರ್ ಸಲಾಂ ಬೇತ್ರಿ, ಎಮೆರ್ಜಿಂಗ್ ಪ್ಲೇಯರ್ ಸುಹಾನ್ ಮೆಹಕ್ ಕುಶಾಲನಗರ, ಬೆಸ್ಟ್ ಫೀಲ್ಡರ್ ಕಾಜಾ ತಾಜ್ ಕುಶಾಲನಗರ, ಬೆಸ್ಟ್ ಕ್ಯಾಚ್ ನಾಸಿರ್ ಕೂಡಿಗೆ, ಬೆಸ್ಟ್ ವಿಕೆಟ್ ಕೀಪರ್ ಹಾರಿಸ್ ಮಡಿಕೇರಿ, ಅತಿ ಹೆಚ್ಚು ಸಿಕ್ಸರ್ ರಿಯಾಸ್ ಇಯ್ಯಾ ಪಡೆದುಕೊಂಡರು.

ಸಾಧಕರಿಗೆ ಸನ್ಮಾನ :  ಸೇವ್ ದಿ ಡ್ರೀಮ್ಸ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡುವುದರ ಮೂಲಕ ಬಡರೋಗಿಗಳಿಗೆ ಆರ್ಥಿಕ ಸಂಪನ್ಮೂಲ ಒದಗಿಸಿಕೊಡುತ್ತಿರುವ ಜಾಬಿರ್ ನಿಝಾಮಿ, ಪಂಜ ಕುಸ್ತಿ ವಿಶೇಷ ಚೇತನ ಪಟು ಹಸನ್ ಅರೆಕಾಡು,ಬ್ರೈನೋ ಬ್ರೈನ್ ಅಲೂಫ್ ಮಡಿಕೇರಿ,
ಇವರನ್ನು ಚಿಲ್ ಬಾಯ್ಸ್ ಹಾಗೂ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಐದು ಬಡಕುಟಂಬಗಳಿಗೆ ಗ್ಯಾಸ್ ಸ್ಟೌವ್,ಐದು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ,ಹಾಗೂ ಐದು ಬಡ ಕುಟುಂಬಗಳಿಗೆ ಧನ ಸಹಾಯವನ್ನು ಚಿಲ್ ಬಾಯ್ಸ್ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ,ಎಸ್‌.ಡಿ.ಪಿ.ಐ ಜಿಲ್ಲಾಧ್ಯಕ್ಷ ಅಮೀನ್ ಮೊಹಸ್ಸಿನ್, ಚಿಲ್ ಬಾಯ್ಸ್ ಅಧ್ಯಕ್ಷ ಉನೈಸ್ ಮಡಿಕೇರಿ, ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್‌ ಅಧ್ಯಕ್ಷ ಖಾದರ್, ಕಾನೂನು ಸಲಹೆಗಾರ, ಸುಫಿಯಾನ್ ಮಡಿಕೇರಿ, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಆದಂ ಕುಶಾಲನಗರ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರವೂಫ್, ಹನೀಫ್ ಹಾಲುಗುಂದ,ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವಕ್ತಾರ ರಜಾಕ್ ಬಜೆಗುಂಡಿ, ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ, ಜಾಸೀರ್ ಮೂರ್ನಾಡು,ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಕೀಂ ಸುಂಟ್ಟಿಕೊಪ್ಪ, ಸೇವ್ ದಿ ಡ್ರೀಮ್ಸ್ ಮುಖ್ಯಸ್ಥ ಜಾಬಿರ್ ನಿಝಾಮಿ,
ಅಕೀಲ್ ವಿರಾಜಪೇಟೆ, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಮೊಯ್ದು, ಮಡಿಕೇರಿ ನಗರಸಭಾ ಸದಸ್ಯ ಮನ್ಸೂರ್ ಆಲಿ ರಜಾಕ್ ಎಡಪಲಾ, ಕಬಿನಿ ಹನೀಫ್, ಮುಜೀಬ್ ಮತ್ತಿತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಸಂತ ಸೇವಾಲಾಲ್ ಸಿದ್ಧಾಂತ ಮತ್ತು ವಿಚಾರಧಾರೆ ತಿಳಿದುಕೊಳ್ಳಿ : ವೆಂಕಟನಾಯಕ್ ಸಲಹೆ*
Next Article *ಕರಾಟೆಯಲ್ಲಿ ಗಿನ್ನಿಸ್ ದಾಖಲೆ : ಕೊಡಗಿನ ಶಝಾ ಫಾತಿಮಾಗೆ ಗ್ರಾಮಸ್ಥರಿಂದ ಸನ್ಮಾನ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.