


ಮಡಿಕೇರಿ ಫೆ.17 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ವರ್ಷದಿಂದ ಕೊಡವ ಸಮಾಜದ ಮುಖಾಂತರ ಬಾಳೇಡ ಕುಟುಂಬಸ್ಥರ ಮನೆಗೆ ಹೋಗುವ ಸಂಪರ್ಕ ರಸ್ತೆಯ ಡಾಂಬರೀಕರಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದ 5 ಲಕ್ಷ ದಲ್ಲಿ ನೂತನ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಯಿತು. ಹಲವಾರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ, ರಸ್ತೆಯ ಕಾಮಗಾರಿ ಬಗ್ಗೆ ಶಾಸಕರ ಗಮನಕ್ಕೆ ತಂದಾಗ, ತಕ್ಷಣ ಕಾಮಗಾರಿಯನ್ನು ಕೈಗೊಳ್ಳಲು ನಿರ್ದೇಶಿಸಿದ್ದರು. ರಸ್ತೆಯ ಕಾಮಗಾರಿಯ ಬಗ್ಗೆ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಉತ್ತಮ ರೀತಿಯ ರಸ್ತೆ ನಿರ್ಮಾಣ ಆಗಿದ್ದಕ್ಕೆ, ಶಾಸಕರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಇದಕ್ಕೆ ಸಹಕರಿಸಿದ ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟ್ಟಿರ ಕುಶು ಕುಶಾಲಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.