


ಮಡಿಕೇರಿ ಫೆ.17 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ, ಮಡಿಕೇರಿ. ಕೊಡಗು ಜಿಲ್ಲೆ ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ“ಬೇಟಿ ಬಚವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮದ ಅಂಗವಾಗಿ ತಿತಿಮತಿ ಸರ್ಕಾರಿ ಪ್ರೌಡ ಶಾಲೆಯಲ್ಲಿ “ಸಮಗ್ರ ಮಕ್ಕಳ ಲೈಂಗಿಕ ಶಿಕ್ಷಣದ ಕುರಿತು” ಕಾರ್ಯಕ್ರಮ ನಡೆಯಿತು. ತಿತಿಮತಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮಂಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು, ಪ್ರತಿ ಮನೆಯ ಹೆಣ್ಣು ಮಕ್ಕಳು ಶಿಕ್ಷಣ ಪಡೆಯಬೇಕು. ಅಲ್ಲದೆ ಹೆಣ್ಣು ಮಕ್ಕಳ ಜನನವನ್ನು ಸಂಭ್ರಮಿಸಬೇಕು. ಗಂಡು ಮತ್ತು ಹೆಣ್ಣು ನಡುವೆ ಸಮಾನತೆ ಇರಬೇಕು ಎಂದು ತಿಳಿಸಿದರು. ಕಾನೂನು ಸಲಹೆಗಾರರು, ಸಖಿ ಒನ್ ಸ್ಟಾಪ್ ಸೆಂಟರ್ ಮಡಿಕೇರಿ ಅಂಬಿಕಾ ಮಾತನಾಡಿ ಮಕ್ಕಳಿಗೆ ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ ಕುರಿತು ಮಾಹಿತಿ ನೀಡಿದ್ದರು. ಹೆಣ್ಣು ಮಕ್ಕಳು 18 ವರ್ಷ ಮತ್ತು ಗಂಡು ಮಕ್ಕಳು 21 ವರ್ಷ ತುಂಬುವ ವರೆಗೂ ಮದುವೆಯಾಗಬಾರದು. ಹಾಗೆಯೇ ಮಕ್ಕಳು ವಿದ್ಯಾಭ್ಯಾಸದ ವಯಸ್ಸಿನಲ್ಲಿ ಯಾವುದೇ ಆರ್ಕಷಣೆಗೆ ಒಳಗಾಗದೆ ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕು. ನಂತರ ಮಕ್ಕಳು ತಮ್ಮ ಸಮಸ್ಯೆಯಿದ್ದರೆ ಮಕ್ಕಳ ಸಹಾಯವಾಣಿ 1098 ಕರೆಮಾಡಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಅಲ್ಲದೆ 112 ಪೊಲೀಸ್ ತುರ್ತುಸೇವೆಗೆ ಕರೆ ಮಾಡಬಹುದು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮಡಿಕೇರಿ, ಮಹಿಳಾ ಸಬಲೀಕರಣ ಘಟಕದ ಮಿಷನ್ ಸಂಯೋಜಕರಾದ ಮಮತ ಬಿ.ಎಸ್, ಇವರು ಮಾತನಾಡಿ ಪ್ರತಿ ಮನೆಯ ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು ಅಲ್ಲದೇ ಹೆಣ್ಣು ಮಕ್ಕಳಿಗೆ ಪ್ರೀತಿ, ವಾತ್ಸಲ್ಯ, ಸುರಕ್ಷತೆ ಹಾಗೂ ಪೋಷಣೆ ಲಭಿಸಬೇಕು ಮತ್ತು ಹೆಣ್ಣು ಮಕ್ಕಳನ್ನು ಸಮಾನತೆಯಿಂದ ಕಾಣಬೇಕು ಎಂದು ತಿಳಿಸಿದರು. ಶಾಲಾ ಮಕ್ಕಳಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜೆಂಡರ್ ಸ್ಪಷಲಿಸ್ಟ್ ಎಸ್.ಆರ್.ಕೇಶಿನಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. ತಿತಿಮತಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಸರ್ಕಾರಿ ಪ್ರೌಡ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.