ಮಡಿಕೇರಿ ಫೆ.17 NEWS DESK : ವಿರಾಜಪೇಟೆಯ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯ ಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಲಭಿಸಿದೆ. ಧಾರವಾಡ ಚೇತನ್ ಫೌಂಡೇಶನ್ ವತಿಯಿಂದ ಮೈಸೂರಿನ ಕನ್ನಡ ಸಾಹಿತ್ಯ ಭವನದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ನುಡಿ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎನ್.ಪದ್ಮ ಪ್ರಶಸ್ತಿಯನ್ನು ಸ್ವೀಕರಿಸಿದರು.












