
ಮಡಿಕೇರಿ ಫೆ.18 NEWS DESK : ನಾಡಿನ ಜೀವನದಿ, ಕಾವೇರಿ ನದಿ ಉಗಮಸ್ಥಾನ ತಲಕಾವೇರಿಯ ದೇವಾಲಯಲ್ಲಿ ಸ್ವಚ್ಛತಾ ಕಾರ್ಯದ ಹಿನ್ನೆಲೆ ಫೆಬ್ರವರಿ 19 ರಂದು ಮಧ್ಯಾಹ್ನ 2 ಗಂಟೆ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು, ಭಕ್ತಾಧಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಕೋರಿದ್ದಾರೆ.









