ಮಡಿಕೇರಿ ಫೆ.17 NEWS DESK : 2018-19 ನೇ ಸಾಲಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ತೊಂದರೆಗೊಳಗಾದ ಸಂತ್ರಸ್ತ ಕುಟುಂಬಗಳಿಗೆ ‘ಮನೆ ಹಂಚಿಕೆ’ ಸಂಬಂಧ ಫೆಬ್ರವರಿ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಲಾಟರಿ ಮುಖಾಂತರ ಆಯ್ಕೆಮಾಡಿ ‘ಹಕ್ಕುಪತ್ರ’ ವಿತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ತಿಳಿಸಿದ್ದಾರೆ.











