Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರಿಗೆ ಸಂಕಷ್ಟ : ಎಲ್ಲರ ಹಿತಾಸಕ್ತಿ ಕಾಪಾಡುವುದು ಸಾರಿಗೆ ಪ್ರಾಧಿಕಾರದ ಉದ್ದೇಶ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರಿಗೆ ಸಂಕಷ್ಟ : ಎಲ್ಲರ ಹಿತಾಸಕ್ತಿ ಕಾಪಾಡುವುದು ಸಾರಿಗೆ ಪ್ರಾಧಿಕಾರದ ಉದ್ದೇಶ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಫೆಬ್ರವರಿ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.18 NEWS DESK :  ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ಸು ಮಾಲೀಕರಿಗೆ ತೊಂದರೆಯಾಗಿದೆ. ತೆರಿಗೆ ಪಾವತಿಸಲು ಕೂಡ ಕಷ್ಟವಾಗಿದೆ ಎಂದು ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಖಾಸಗಿ ಬಸ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬಸ್ಸು ಸಂಚಾರಕ್ಕೆ ಸಂಬಂಧಿಸಿದಂತೆ ಎಲ್ಲರ ಹಿತಾಸಕ್ತಿ ಕಾಪಾಡುವುದು ಸಾರಿಗೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಬಸ್ಸು ಸೇವೆ ಒದಗಿಸಲು ಎಲ್ಲರೂ ಮುಂದಾಗಿದ್ದಾರೆ. ಆ ನಿಟ್ಟಿನಲ್ಲಿ ಯಾರಿಗೂ ತೊಂದರೆ ಆಗದಂತೆ ಗಮನ ಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಖಾಸಗಿ ಬಸ್ಸು ಮಾಲೀಕ ಪುಟ್ಟಸ್ವಾಮಿ ಅವರು ಮಾತನಾಡಿ ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳು ಎಲ್ಲೆಲ್ಲಿ ಸಂಚಾರ ಮಾಡುತ್ತಿದೆ ಎಂಬ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು ಎಂದರು. ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ಸು ಮಾಲೀಕರಿಗೆ ತುಂಬಾ ತೊಂದರೆಯಾಗಿದೆ. ತೆರಿಗೆ ಪಾವತಿಸಲು ಸಹ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.
::: ನಷ್ಟದ ಆತಂಕ :::
ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಮೇಶ್ ಜೋಯಪ್ಪ ಮಾತನಾಡಿ ಖಾಸಗಿ ಹಾಗೂ ಸರ್ಕಾರಿ ಬಸ್ ಗಳ ಸಂಚಾರ ಸಾರ್ವಜನಿಕರ ಬೇಡಿಕೆ ಮತ್ತಿರರ ಸಂಬಂಧ ಸರ್ವೆ ವರದಿ ಒದಗಿಸುವಂತೆ ಕೋರಿದರು. ಸರ್ಕಾರಿ ಮತ್ತು ಖಾಸಗಿ ಬಸ್ಸ್‍ಗಳ ಸಂಚಾರ ನಡುವಿನ ಸಮಯ ಪಾಲನೆ ಅತಿಮುಖ್ಯ. ಜೊತೆಗೆ ಆರೋಗ್ಯಕರ ಪೈಪೋಟಿ ಇರಬೇಕು, ಆದರೆ ಈ ಕೆಲಸ ಆಗುತ್ತಿಲ್ಲ ಎಂದರು. ಖಾಸಗಿ ಬಸ್ ಮಾಲೀಕರು ತಮ್ಮ ಅಹವಾಲು ಮಂಡಿಸಿ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ 151 ಖಾಸಗಿ ಬಸ್ ಸಂಚಾರ ಇದ್ದಾಗಿಯೂ ಪುನ: ಕೆಎಸ್‍ಆರ್‍ಟಿಸಿ ಅವರು ಕೋರಿರುವ 64 ಮಾರ್ಗಗಳನ್ನು ಮಂಜೂರು ಮಾಡಿದಲ್ಲಿ ಸಂಪೂರ್ಣ ನಷ್ಟವಾಗುವುದರೊಂದಿಗೆ ಅನಾರೋಗ್ಯಕರ ಪೈಪೋಟಿ ಏರ್ಪಡಲಿದೆ ಎಂದು ತಿಳಿಸಿದರು. ಯಾವುದೇ ಖಾಸಗಿ ವಾಹನಗಳ ಸಂಚಾರ ಸಾಧ್ಯವಿಲ್ಲವೆಂದೂ, ಇದರಿಂದ ಕೆಎಸ್‍ಆರ್‍ಟಿಸಿ ವಾಹನಗಳಿಗೆ ರಹದಾರಿ ಮಂಜೂರು ಮಾಡದಂತೆ ಕೋರಿರುತ್ತಾರೆ. ಸರ್ಕಾರ ಈಗಾಗಲೇ ಸಂಚರಿಸುತ್ತಿರುವ ಎಲ್ಲಾ ಖಾಸಗಿ ಬಸ್‍ಗಳನ್ನು ಸೇವ್ಡ್ ಆಪರೇಟರ್ಸ್ ಎಂದು ತಿಳಿಸಿರುವುದರಿಂದ ಸರ್ಕಾರದ ತೀರ್ಮಾನದಂತೆ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ಮಾಡಬೇಕು ಎಂದು ಖಾಸಗಿ ಬಸ್ ಮಾಲೀಕರ ಪರವಾಗಿ ವಕೀಲರು ಕೋರಿದರು. ಈ ಸಂಬಂಧ ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರು ಸಭೆಯಲ್ಲಿ ವಿನಂತಿಸಿ ಕುಶಾಲನಗರದಲ್ಲಿ ಹೊಸದಾಗಿ ಡಿಪೋ ಆರಂಭ ಆಗುವುದರಿಂದ ಶೀಘ್ರವಾಗಿ ರಹದಾರಿ ಮಂಜೂರು ಮಾಡಿದಲ್ಲಿ ಸರ್ವಿಸ್ ಪ್ರಾರಂಬಿಸಿ, ಸಾರ್ವಜನಿಕರಿಗೆ ಸೇವೆ ನೀಡಲಾಗುವುದೆಂದು ವಿವರಿಸಿದರು. ಈ ಎಲ್ಲಾ ವಿವರಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸರ್ಕಾರವು ನೀಡಿರುವ ಆದೇಶಗಳು, ಘನ ನ್ಯಾಯಾಲಯದ ಆದೇಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಸಾರಿಗೆ ಇಲಾಖೆ ವತಿಯಿಂದ ನೀಡಲಾದ ವರದಿ ಪರಿಶೀಲಿಸಲಾಗಿದೆ. ಖಾಸಗಿ ಬಸ್ ಮಾಲೀಕರುಗಳ ಅಹವಾಲುಗನ್ನು ಸಭೆಯು ಪರಿಗಣನೆಗೆ ತೆಗೆದುಕೊಂಡಿದೆ. ಈಗಾಗಲೇ ಶಕ್ತಿ ಯೋಜನೆ ಜಾರಿಯಲ್ಲಿದ್ದು, ಕೆಎಸ್‍ಆರ್‍ಟಿಸಿ ಮಜಲು ವಾಹನಗಳ ಅಗತ್ಯತೆಯೂ ಇದೆ. ಆದ್ದರಿಂದ ನಿಯಮಗಳಿಗೆ ಅನುಸಾರವಾಗಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಿ.ನಾಗರಾಜಾಚಾರ್, ಕೆಎಸ್‍ಆರ್‍ಟಿಸಿ. ಘಟಕ ವ್ಯವಸ್ಥಾಪಕರಾದ ಮೆಹಬೂಬ್ ಆಲಿ, ಜನಾರ್ಧನ ಪ್ರಭು, ವಕೀಲರಾದ ನಾಗೇಶ್ ಸಾರಿಗೆ ಇಲಾಖೆಯ ಡಿ.ಕೆ.ರೀಟಾ ಹಾಗೂ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.