
ಮಡಿಕೇರಿ ಫೆ.19 NEWS DESK : ಮಕ್ಕಳ ವಿಶೇಷ ಪೊಲೀಸ್ ಘಟಕ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದೊಂದಿಗೆ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು. ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯ ಸಿ.ಜೆ.ರೋಹಿತ್ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆಗಳು, ಮಕ್ಕಳ ಹಕ್ಕುಗಳು ಮತ್ತು ಇತರೆ ಕಾನೂನು ಪ್ರಕ್ರಿಯೆಗಳ ಬಗ್ಗೆ ತರಬೇತಿ ನೀಡಿದರು. ಈ ಸಂದರ್ಭ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.









