ಮಡಿಕೇರಿ ಫೆ.19 NEWS DESK : ಕರ್ನಾಟಕ ಸರ್ಕಾರದ ಸಚಿವರ ದರ್ಜೆಯ ಸ್ಥಾನಮಾನ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಫೆಬ್ರವರಿ, 20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಧ್ಯಕ್ಷರು ಫೆಬ್ರವರಿ, 20 ರಂದು ಬೆಳಗ್ಗೆ 10 ಗಂಟೆಗೆ ನಗರದ ಜೂನಿಯರ್ ಕಾಲೇಜು ಆವರಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ನಡೆಯುವ ಪಂಜೆ ಮಂಗೇಶರಾಯರ 150 ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಬಿ.ರವಿಕುಮಾರ್ ತಿಳಿಸಿದ್ದಾರೆ.











