




ಬೆಂಗಳೂರು ಫೆ.20 NEWS DESK : ಏಕಾಏಕಿ 2 ಅಂತಸ್ತಿನ ಕಟ್ಟಡ ಕುಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಪ್ಪಸಂದ್ರದಲ್ಲಿ ನಡೆದಿದೆ. ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಮನೆ ವಾಲುತ್ತಿರುವ ಕುರಿತು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಕರೆ ಬಂದಿದ್ದು, ಕೂಡಲೇ ಎರಡು ಅಗ್ನಿಶಾಮಕ ದಳದ ವಾಹನಗಳು ಎಸ್‌ಡಿಆರ್‌ಎಫ್ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ, ಮನೆಯಲ್ಲಿದ್ದವರನ್ನು ಹೊರಗೆ ಕಳುಹಿಸಿದ ಪರಿಣಾಮ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.