
ಮಡಿಕೇರಿ NEWS DESK ಫೆ.20 : ಮೈಸೂರಿನ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ವತಿಯಿಂದ ನೀಡಲಾಗುವ ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿಗೆ ಬಹಗಾರ್ತಿ, ಚಿತ್ರ ನಿರ್ಮಾಪಕಿ, ನಟಿ ಹಾಗೂ ಸಹನಿರ್ದೇಶಕಿ ಈರಮಂಡ ಹರಿಣಿ ವಿಜಯ್ ಆಯ್ಕೆಯಾಗಿದ್ದಾರೆ. ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 40ನೇ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನ ಇನ್ಸ್ಟಿ ಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ಫೆ.23 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ರಾಷ್ಟçಕವಿ ಕುವೆಂಪು ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಈರಮಂಡ ಹರೀಣಿ ವಿಜಯ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಸಾಹಿತ್ಯೋತ್ಸವವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಉದ್ಘಾಟಿಸಲಿದ್ದು, ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಈರಮಂಡ ಹರೀಣಿ ವಿಜಯ್ ಅವರು ಸಾಹಿತ್ಯ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳಲ್ಲೂ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇವರು ಕೊಡಗಿನ ಪ್ರತಿಷ್ಠಿತ ಕೊಡಗಿನ ಗೌರಮ್ಮ ದತ್ತಿನಿಧಿ ಪ್ರಶಸ್ತಿ ಹಾಗೂ ಗೋಪಾಲಕೃಷ್ಣ ದತ್ತಿನಿಧಿ ಪ್ರಶಸ್ತಿಗೂ ಈ ಹಿಂದೆ ಭಾಜರಾಗಿದ್ದರು.








