
ಮಡಿಕೇರಿ NEWS DESK ಫೆ.21 : ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಕಟ್ಟಡದ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳಿಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು 1 ಕೋಟಿ ರೂ. ಮಂಜೂರು ಮಾಡಿದ್ದಾರೆ. ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಮಿತಿಯ ಅಧ್ಯಕ್ಷರು ಹಾಗೂ ನಿದೇಶಕರು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನ ಗೃಹ ಕಛೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದರು. ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಕಟ್ಟಡದ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೋರಿ ಮನವಿ ಸಲ್ಲಿಸಿದರು. ಶಾಸಕ ಡಾ.ಮಂತರ್ ಗೌಡ ಅವರ ಮನವಿಗೆ ಸ್ಪಂದಿಸಿದ ಸಚಿವರು 1 ಕೋಟಿ ರೂ. ಅನುದಾನ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಯೋಗೇಶ್ ಎಚ್.ಆರ್, ಹಾಪ್ ಕಾಮ್ಸ್ ಅಧ್ಯಕ್ಷ ರಮೇಶ್ ಚಂಗಪ್ಪ, ಉಪಾಧ್ಯಕ್ಷ ಮಧುದೇವಯ್ಯ, ಪ್ರಮುಖರಾದ ಕಿಶನ್ ಮಡಿಕೇರಿ ಹಾಗೂ ಸಮಿತಿಯ ನಿರ್ದೇಶಕರುಗಳು ಉಪಸ್ಥಿತರಿದ್ದರು.








