Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಕಾವ್ಯಯಾನ ಕವಿಗೋಷ್ಠಿ : ಕವಿತೆಯನ್ನು ಕೇಳುವ ಸಹೃದಯರ ಕೊರತೆ ಉಂಟಾಗಿರುವುದು ವಿಷಾದನೀಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಕಾವ್ಯಯಾನ ಕವಿಗೋಷ್ಠಿ : ಕವಿತೆಯನ್ನು ಕೇಳುವ ಸಹೃದಯರ ಕೊರತೆ ಉಂಟಾಗಿರುವುದು ವಿಷಾದನೀಯ*

ಫೆಬ್ರವರಿ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ಫೆ.23 : ಕವಿತೆಯನ್ನು ಕೇಳುವ ಸಹೃದಯರ ಕೊರತೆ ಉಂಟಾಗಿರುವುದು ವಿಷಾದನೀಯ ಎಂದು  ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್  ಹೇಳಿದರು. ಬೆಂಗಳೂರಿನ ರಂಗಮಂಡಲ ಹಾಗೂ ಕೊಡಗು ಕವಿ ಬಳಗದ ವತಿಯಿಂದ ಕೂಡ್ಲೂರು ಗ್ರಾಮದ ಪೂರ್ಣಚಂದ್ರ  ಕುಟೀರದಲ್ಲಿ   ಆಯೋಜಿಸಿದ್ದ  ಕೊಡಗು ಕಾವ್ಯಯಾನ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು,  ಕವಿತೆಗಳು   ಜನರಲ್ಲಿ ಪರಸ್ಪರ ಸ್ನೇಹ, ವಿಶ್ವಾಸ ಹಾಗೂ ಸೌಹಾರ್ದತೆಯನ್ನು ಒಡಮೂಡಿಸುತ್ತವೆ. ಮಾಧ್ಯಮಗಳು ಕಾವ್ಯಗಳನ್ನು ಜನರಿಂದ ದೂರ ಮಾಡುತ್ತಿವೆ ಎಂದು ಹೇಳಿದರು.  ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಿಂದಾಗಿ ಕಾವ್ಯ ರಂಗದಲ್ಲಿ ಒಂದಷ್ಟು ಚಟುವಟಿಕೆಗಳು ಕಾಣುತ್ತಿವೆ. ಈ ಮೂಲಕ ನಾಡಿನೆಲ್ಲೆಡೆ ಇರುವ ಚುಟುಕು ಕವಿಗಳ ಸಮಾಗಮ ಹಾಗೂ ಸ್ನೇಹ ಸಂಗಮ ಸಾಧ್ಯವಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇಂದಿನ ಆಧುನಿಕ ಕಾಲಘಟ್ಟದ  ಬದಲಾದ ಪರಿಸ್ಥಿತಿಯಲ್ಲಿ ಆಧುನಿಕ ಕವಿಗಳು  ಆಯಾಯ ಪರಿಸರ ಹಾಗೂ ಸಂದರ್ಭಗಳ ಕುರಿತು ರಚಿಸುವ ಕವನಗಳನ್ನು   ವಾಚಿಸುವ ಸಂದರ್ಭ ಪರಂಪರೆಯ ಮರೆವು ಆಗದಂತೆ ಎಚ್ಚರ ವಹಿಸಬೇಕು. ಹೊಸ ಕವಿಗಳು ಹಾಗೂ ಕವಿತೆಗಳನ್ನು ಆಸ್ವಾದಿಸುವ ಕೆಲಸವಾಗಬೇಕು ಎಂದು   ಮುಕುಂದ ರಾಜ್  ಹೇಳಿದರು. ಕಾವ್ಯ ಸಂಸ್ಕ್ರತಿ ಯಾನದ ಪ್ರಧಾನ ಸಂಚಾಲಕ ಮಲ್ಲಿಕಾರ್ಜುನ ಮಹಾಮನೆ ಪ್ರಾಸ್ತಾವಿಕವಾಗಿ ಮಾತನಾಡಿ, ಕವಿತೆ ಜನಸಾಮಾನ್ಯರ ಧ್ವನಿ. ಅವರ ನೋವು ಹಾಗೂ ನಲಿವಿಗೆ ಸಂಜೀವಿನಿಯಾಗಿದೆ. ಸಾಮಾನ್ಯ ಜನರು ಸೇರಿದಂತೆ ಎಲ್ಲೆಡೆ  ದುಡಿವ  ಕೂಲಿ ಕಾರ್ಮಿಕರಲ್ಲೂ ಸೊಗಸಾದ ಕವಿತೆಗಳು ಮೂಡಿ ಬರುತ್ತಿವೆ. ಇತ್ತೀಚಿನ ದಿನಗಳಲ್ಲಿ ಕವಿ ಹಾಗೂ ಕವಿತೆಗಳಿಗೆ ಸಿಗಬೇಕಾದ ಸೂಕ್ತ ಸ್ಥಾನ ಮಾನ ದೊರಕದಿರುವುದನ್ನು ಮನಗಂಡು ನಾಡಿನಾದ್ಯಂತ ಜನರೆಡೆಗೆ ಕಾವ್ಯ ಎನ್ನುವ ಘೋಷವಾಕ್ಯದೊಂದಿಗೆ  ಕವಿ ಕಾವ್ಯ  ಸಂಸ್ಕ್ರತಿ ಯಾನ ಕೈಗೊಂಡು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಾವ್ಯ ಯಾನ ಸಂಚರಿಸುತ್ತಿದೆ ಎಂದರು. ಕಾವ್ಯ  ಸಂಸ್ಕ್ರತಿ ಯಾನ ದ  ಸರ್ವಾಧ್ಯಕ್ಷೆ  ಸ್ಮಿತಾ ಅಮೃತರಾಜು, ರಾಮನಗರ ಜಿಲ್ಲೆಯ ಕಾವ್ಯ ಯಾನದ ಸರ್ವಾಧ್ಯಕ್ಷ ಡಾ.ಬೈರಮಂಗಲ ರಾಮೇಗೌಡ, ಕೊಡಗು ಜಿಲ್ಲೆಯ ಹಿರಿಯ ಸಹಕಾರಿ ಟಿ.ಆರ್.ಶರವಣಕುಮಾರ್, ಹಿರಿಯ ಸಾಹಿತಿ ಕಣಿವೆ ಭಾರಧ್ವಜ್ ಆನಂದ ತೀರ್ಥ, ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ, ರೋಹಿಣಿ ಶರವಣಕುಮಾರ್, ಮಧು ಆರ್ಯ, ಡಾ.ಟಿ.ಎಸ್..ವಿವೇಕಾನಂದ, ಸಿನಿಮಾ ನಿರ್ದೇಶಕ ರಂಗಸ್ವಾಮಿ, ಆನಂದಕುಮಾರ್, ಉಷಾರಾಣಿ, ಭುವನೇಶ್ವರಿ,  ಇದ್ದರು. ಕವಿಗೋಷ್ಠಿಯಲ್ಲಿ  ಸುನೀತಾ, ಮಾರುತಿ ದಾಸಣ್ಣನವರ್, ಕೃಪಾ ದೇವರಾಜು, ನಾ.ಕನ್ನಡಿಗ, ಕಿಶೋರ್ ಕುಮಾರ್, ವೈಲೇಶ್, ಸಂಗೀತಾ ರವಿರಾಜ್, ಹಾ.ತಿ.ಜಯಪ್ರಕಾಶ್, ಹೇಮಂತ್  ಪಾರೆರಾ, ಶರ್ಮಿಳಾ ರಮೇಶ್, ರಂಜಿತಾ ಕವಲಪಾರ, ರಾಣಿ ವಸಂತ್, ಲೀಲಾ ಕುಮಾರಿ ತೊಡಿಕಾನ, ಮಾಲಾ ಮೂರ್ತಿ, ರಮ್ಯಾ ಮೂರ್ನಾಡು, ಅನುಶ್ರೀ ಮೊದಲಾದ ಕವಿಗಳು ಕಾವ್ಯ ವಾಚಿಸಿದರು. ಕಾವ್ಯ ಸಂಸ್ಕೃತಿ ಯಾನ ಕೊಡಗು ಜಿಲ್ಲಾ ಸಂಚಾಲಕಿ ಕೃಪಾ ದೇವರಾಜು ಕಾರ್ಯಕ್ರಮ ನಿರೂಪಿಸಿದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ನಾಢಗೀತೆ ಹಾಡಿದರು. ಕಾರ್ಯಕ್ರಮಕ್ಕೂ ಮುನ್ನಾ ಬೆಂಗಳೂರಿನಿಂದ ಆಗಮಿಸಿದ  ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್ ಅವರಿಂದ ಕಾವ್ಯ ದೀವಟಿಗೆಯನ್ನು ಕಾವ್ಯ ಯಾನದ  ಸರ್ವಾಧ್ಯಕ್ಷೆ ಸ್ಮಿತಾ ಅಮೃತರಾಜು ಸ್ವೀಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.