



ಸುಂಟಿಕೊಪ್ಪ NEWS DESK ಫೆ.24 : ಸುಂಟಿಕೊಪ್ಪ ನಗರದಲ್ಲಿ ಸುಂಟಿಕೊಪ್ಪ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ದ್ವಿಚಕ್ರ ವಾಹನ ಸವಾರರಿಗೆ ಚಾಲನಾ ಸುರಕ್ಷತೆ, ರಸ್ತೆ ಸುರಕ್ಷತೆ ಮತ್ತು ವಾಹನ ಚಾಲನೆಯ ಕುರಿತು ಜಾಗೃತಿ ಮೂಡಿಸಿದರು. ವಾಹನ ಚಾಲನೆಯ ಸಮಯದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ತಿಳಿಸಿದ ಅಧಿಕಾರಿಗಳು ಮಕ್ಕಳು ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಲಹೆ ನೀಡಿದರು.