Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಪ್ರತಿಭೋತ್ಸವ : ಪೊಲೀಸರ ಮಕ್ಕಳ ಪ್ರತಿಭೆ ಅನಾವರಣಗೊಳ್ಳಲಿ : ಎಂ.ಪಿ.ಕೇಶವ ಕಾಮತ್ ಕರೆ*
ಇತ್ತೀಚಿನ ಸುದ್ದಿಗಳು

*ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಪ್ರತಿಭೋತ್ಸವ : ಪೊಲೀಸರ ಮಕ್ಕಳ ಪ್ರತಿಭೆ ಅನಾವರಣಗೊಳ್ಳಲಿ : ಎಂ.ಪಿ.ಕೇಶವ ಕಾಮತ್ ಕರೆ*

February 24, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಫೆ.24 : ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳಲ್ಲಿ ಅಡಗಿರುವ ಕಲಾಪ್ರತಿಭೆಯನ್ನು ಅನಾವರಣಗೊಳಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಸದ್ಬಳಕೆಯಾಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಕರೆ ನೀಡಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ನ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ವತಿಯಿಂದ ತಿಂಗಳಿಗೊಂದು ಕಾರ್ಯಕ್ರಮದಡಿ ಮಿಡಿದ ಪೊಲೀಸ್ ಹೃದಯಗಳಿಂದ ಘೋಷವಾಕ್ಯದ “ಪ್ರತಿಭೋತ್ಸವ” ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಯಿತು. ಜನಪದ ಗೀತೆ ಮತ್ತು ಭಾವಗೀತೆಗಳ ಸಂಗಮದ “ಪ್ರತಿಭೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂ.ಪಿ.ಕೇಶವ ಕಾಮತ್, ಕಾನೂನನ್ನು ಕಾಪಾಡುವ ಪೊಲೀಸರಲ್ಲಿ ಕೂಡ ಕಲಾವಿದನಿರುತ್ತಾನೆ. ಈ ಕಲಾವಿದನ ಪ್ರತಿಭೆಯನ್ನು ಪ್ರತಿಬಿಂಬಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಹೆಚ್ಚು ಉಪಯುಕ್ತವಾಗಿದೆ. ಇದೇ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳ ಪ್ರತಿಭೆ ಕೂಡ ಅನಾವರಣಗೊಳ್ಳಬೇಕು. ಇದರಿಂದ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ದೊರೆತಂತ್ತಾಗುತ್ತದೆ ಮತ್ತು ಶಾಲಾ, ಕಾಲೇಜುಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಸ್ಫೂರ್ತಿ ದೊರೆತಂತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಕಾರ್ಯಕ್ರಮಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಸಂಪೂರ್ಣ ಸಹಕಾರ ನೀಡಲಿದ್ದು, ಪೊಲೀಸರು ಕಸಾಪದ ಸದಸ್ಯತ್ವ ಪಡೆದುಕೊಳ್ಳುವಂತೆ ಎಂ.ಪಿ.ಕೇಶವ ಕಾಮತ್ ಮನವಿ ಮಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಪೊಲೀಸ್ ಸಾಂಸ್ಕೃತಿಕ ವೇದಿಕೆ ನಡೆಸುವ ಯಾವುದೇ ಕಾರ್ಯಕ್ರಮಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಬೆಂಗಾವಲಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು. ನಿತ್ಯ ಖಾಕಿ ಸಮವಸ್ತ್ರ ಧರಿಸಿ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸರಿಗೆ ತಿಂಗಳಿಗೊಮ್ಮೆ ನಡೆಸುವ ಸಾಂಸ್ಕೃತಿಕ ಕಾರ್ಯಕ್ರಮ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ಈ ವೇದಿಕೆಯಡಿ ಕಲಾ ಪ್ರತಿಭೆಯನ್ನು ಪ್ರದರ್ಶಿಸುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಾಷ್ಟ್ರ ಮಟ್ಟದಲ್ಲೂ ಮಿಂಚಬೇಕು ಎಂದರು. ಪೊಲೀಸ್ ಸಾಂಸ್ಕೃತಿಕ ವೇದಿಕೆ ಮತ್ತು ಕನ್ನಡ ಸಾಹಿತ್ಯ ಪರಿಷತ್ ಜಂಟಿಯಾಗಿ ಮುಂದಿನ ದಿನಗಳಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸೋಣವೆಂದು ಟಿ.ಪಿ.ರಮೇಶ್ ಹೇಳಿದರು. ಜಾನಪದ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ ಬದುಕಿನ ಜಂಜಾಟದಿಂದ ಹೊರ ಬಂದು ಕೊಂಚ ಕಾಲ ಸಾಂಸ್ಕೃತಿಕ ಸಂಭ್ರಮದಲ್ಲಿ ಮನಸ್ಸನ್ನು ಹಗುರವಾಗಿಸಿಕೊಳ್ಳಲು ರಚನೆಯಾಗಿರುವ ಪೊಲೀಸ್ ಸಾಂಸ್ಕೃತಿಕ ವೇದಿಕೆ ಒಂದು ವಿಭಿನ್ನ ಪ್ರಯತ್ನವಾಗಿದೆ ಎಂದು ಶ್ಲಾಘಿಸಿದರು. ಪ್ರತಿ ತಿಂಗಳು ಕಾರ್ಯಕ್ರಮ ಆಯೋಜಿಸುವ ಚಿಂತನೆ ಮತ್ತು ಯೋಜನೆಯನ್ನು ಮುಂದುವರೆಸಿಕೊಂಡು ಹೋಗುವಂತೆ ಸಲಹೆ ನೀಡಿದರು. ಕಸಾಪದ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಮಾತನಾಡಿ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ, ಸಂಗೀತದ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬಹುದು. ಪೊಲೀಸ್ ಸಾಂಸ್ಕೃತಿಕ ವೇದಿಕೆಯ ರಚನೆ ಅದ್ಭುತ ಚಿಂತನೆಯಾಗಿದೆ. ಇದು ಬದುಕಿನ ಜಂಜಾಟವನ್ನು ಮರೆತು ಕೌಟುಂಬಿಕ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ಒಂದೆಡೆ ಸೇರಿ ಪ್ರತಿಭೆಯನ್ನು ವಿನಿಮಯ ಮಾಡಿಕೊಳ್ಳಲು ಸಹಕಾರಿಯಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ಡಿವೈಎಸ್‌ಪಿಗಳಾದ ಮಡಿಕೇರಿಯ ಪಿ.ಎ.ಸೂರಜ್, ಸೋಮವಾರಪೇಟೆಯ ಗಂಗಾಧರಪ್ಪ ಆರ್.ವಿ, ವಿರಾಜಪೇಟೆಯ ಮಹೇಶ್ ಕುಮಾರ್, ಸೆನ್ ಡಿವೈಎಸ್‌ಪಿ ರವಿ, ವೃತ್ತ ನಿರೀಕ್ಷಕರಾದ ಐ.ಪಿ.ಮೇದಪ್ಪ, ಅನೂಪ್ ಮಾದಪ್ಪ ಆರ್.ಪಿ.ಚೆನ್ನ ನಾಯಕ, ಠಾಣಾಧಿಕಾರಿಗಳಾದ ತಮ್ಮಯ್ಯ, ಲತಾ, ನವೀನ್, ಮಂಜುನಾಥ್, ಗೀತಾ ಹೆಚ್.ಟಿ ಮತ್ತಿತರ ಪೊಲೀಸರ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ಮೂಡಿ ಬಂದ ಜನಪದ ಗೀತೆ ಮತ್ತು ಭಾವಗೀತೆ ಕಲಾಭಿಮಾನಿಗಳ ಮನಸೂರೆಗೊಂಡಿತು. ಪ್ರತಿಭೆಯನ್ನು ಅನಾವರಣಗೊಳಿಸಿದ ಪೊಲೀಸರಿಗೆ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹಿಸಲಾಯಿತು. ಮಹಿಳಾ ಸಿಬ್ಬಂದಿ ಕಾವೇರಮ್ಮ ಪ್ರಾರ್ಥಿಸಿ, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಚಂದ್ರಶೇಖರ್ ಸ್ವಾಗತಿಸಿ, ಮಡಿಕೇರಿ ನಗರ ವೃತ್ತ ನಿರೀಕ್ಷಕ ರಾಜು ಹಾಗೂ ಕಂಟ್ರೋಲ್ ರೂಮ್ ಠಾಣಾಧಿಕಾರಿ ಧನಂಜಯ ನಿರೂಪಿಸಿದರು. ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ವತಿಯಿಂದ ಪ್ರತಿ ತಿಂಗಳ 4ನೇ ಶನಿವಾರದಂದು ಪ್ರತಿಭೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಹಲೋ ಪೋಷಕರೇ… ಮಕ್ಕಳಿಗೂ ಹೆಲ್ಮೆಟ್‌ ಧರಿಸಿ*
Next Article *ಬೇಂಗ್ ನಾಡ್ ಕೊಡವ ಸಮಾಜದ ನೂತನ ಪ್ರವೇಶದ್ವಾರ ಮತ್ತು ಅಡುಗೆ ಮನೆ ಉದ್ಘಾಟನೆ* 

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.