
ಮಡಿಕೇರಿ ಫೆ.25 NEWS DESK : ಕುಶಾಲನಗರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯಲ್ ಸ್ವೆಟರ್ ವಿತರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ವಿಕಸಿತ ಭಾರತದ ಕನಸನ್ನು ನನಸು ಮಾಡುವಲ್ಲಿ ಮಕ್ಕಳ ಪಾತ್ರ ಮುಖ್ಯವಾಗಿದೆ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಮಾಜ ವಿರೋಧಿಗಳಿಗೆ ಅವಕಾಶಗಳು ಹೆಚ್ಚಾಗುತ್ತಿದೆ ಎಂದರು. ಸಾಮಾನ್ಯ ಜನರು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥತಿ ಮೈಸೂರಿನಲ್ಲಿದೆ. ಗೋಣಿಕೊಪ್ಪದಲ್ಲಿ ಪೊಲೀಸರ ಮೇಲೆ ನಡೆದ ದಾಳಿ ಗಮನಿಸಿದ್ದೇನೆ. ಪೊಲೀಸರನ್ನುಗೌರವದಿಂದ ಕಾಣಬೇಕು. ಪೊಲೀಸರ ಸಮವಸ್ತ್ರಕ್ಕೆ ಗೌರವಿಸಬೇಕು. ಪೊಲೀಸ್ ಇಲಾಖೆಯ ರಕ್ಷಣೆಯ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಇಲ್ಲವಾದಲ್ಲಿ ಭವಿಷ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ತೊಂದರೆಯಾಗಲಿದೆ. ರಾಜ್ಯ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಈ ಸಂದರ್ಭ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪಕ್ಷದ ಕಾರ್ಯಕರ್ತರು, ಶಿಕ್ಷಕರು, ಶಾಲಾ ಅಭಿವೃದ್ದಿ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.









