
ಮಡಿಕೇರಿ ಫೆ.25 NEWS DESK : ಮಹಾಶಿವರಾತ್ರಿಯ ಪ್ರಯುಕ್ತ ಮೈಸೂರಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮೈಸೂರಿನಲ್ಲಿ ವಿಶ್ವನಾಥನ ದಿವ್ಯ ದರ್ಶನ ಮತ್ತು 12 ದಿನಗಳ ಜ್ಞಾನ-ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದೆ. ಮೈಸೂರು ನಗರದ ಹುಣಸೂರು ರಸ್ತೆಯಲ್ಲಿರುವ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಶಿ ವಿಶ್ವನಾಥನ ಮಾದರಿಯ ಮಂದಿರ ನಿರ್ಮಾಣ ಮಾಡಿ ಅನೇಕರಿಗೆ ಈಶ್ವರೀಯ ಸಂದೇಶವನ್ನು ನೀಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಮಡಿಕೇರಿ ಬ್ರಹ್ಮಾಕುಮಾರಿ ಶಾಖೆಯ ಸಂಚಾಲಕರಾದ ಬ್ರಹ್ಮಾಕುಮಾರಿ ಧನಲಕ್ಷ್ಮಿ ಅಕ್ಕನವರು ಭಾಗವಹಿಸಿ ಏಕಾಗ್ರತೆ ಕುರಿತಾದ ಚಿಂತನಾ ಕಾರ್ಯಕ್ರಮ ನಡೆಸಿಕೊಟ್ಟರು. ಮಡಿಕೇರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭ ನಿವೃತ್ತ ಉಪನ್ಯಾಸಕರು ಹಾಗೂ ಬರಹಗಾರರಾದ ಕಸ್ತೂರಿ ಗೋವಿಂದಮಯ್ಯ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಚೈತನ್ಯ ದೇವಿ, ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಹಾಗೂ ಮಾನಸಿಕ ನೆಮ್ಮದಿಗಾಗಿ “ಮೈಂಡ್ ಸ್ಪಾ” ವಿಶೇಷ ಉಪನ್ಯಾಸ ಕಾರ್ಯಕ್ರಮ, ರಾಜಯೋಗ ಶಿಬಿರ, ಪ್ರತಿನಿತ್ಯ ವಿಶೇಷ ಗಣ್ಯರಿಂದ ಪ್ರವಚನ ಹಾಗೂ ಆಧ್ಯಾತ್ಮಿಕ ಚಿಂತನಾ ಕಾರ್ಯಕ್ರಮ ನಡೆಯುತ್ತಿದೆ.









