
ಸಿದ್ದಾಪುರ ಫೆ.25 NEWS DESK : ನೆಲ್ಲಿಹುದಿಕೇರಿ ಶ್ರೀ ಮಹಾದೇವ ಮತ್ತು ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಮಾ.1 ರಿಂದ 5ರ ವರೆಗೆ ಶ್ರೀ ಮಹಾದೇವ, ಶ್ರೀ ಮಹಾಗಣಪತಿ ಮತ್ತು ಶ್ರೀ ದುರ್ಗಾದೇವಿ ದೇವರ ಪ್ರತಿಷ್ಠಾ ಅಷ್ಠಬಂಧ, ಬ್ರಹ್ಮಕಳಶೋತ್ಸವ ಹಾಗೂ ವಾರ್ಷಿಕೋತ್ಸವ ನಡೆಯಲಿದೆ.
ದೇವಾಲಯದಲ್ಲಿ ಐದು ದಿನಗಳ ಕಾಲ ಪುತ್ತೂರಿನ ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.1 ರಂದು ಸಂಜೆ 5 ಗಂಟೆಗೆ ತಂತ್ರಿಗಳ ಆಗಮನ, 7 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ಪಂಚಗವ್ಯ, ಪುಣ್ಯಾಹ ವಾಚನ, ಆಚಾರ್ಯವರ್ಣ, ಪ್ರಸಾದ ಪರಿಗ್ರಹ, ಪಶುದಾನ ಶುದ್ಧಿ, ಅಂಕುರ ಆರೋಹಣ, ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ದಿಕ್ಪಾಲಕ ಬಲಿ, ದುರ್ಗಾದೇವರ ಆದಿವಾಸ ಪೂಜೆ, ಶಯನಾದಿವಾಸ ಜರುಗಲಿದೆ. ಮಾ.2 ರಂದು ಬೆಳಿಗ್ಗೆ ಅಂಕುರ ಪೂಜೆ, ಗಣಪತಿ ಹೋಮ, ದುರ್ಗಾದೇವಿ ಪ್ರತಿಷ್ಠಾ ಹೋಮ, ಪ್ರತಿಷ್ಠಾ ಕಳಸ ಪೂಜೆ, 8.30ರ ಮೀನ ಲಗ್ನದ ಶುಭಮೂರ್ತದಲ್ಲಿ ಗಣಪತಿ ಪ್ರತಿಷ್ಠೆ, 11.25ರ ವೃಷಭ ಲಗ್ನದ ಶುಭಮುಹೂರ್ತದಲ್ಲಿ ದುರ್ಗಾದೇವಿ ಪ್ರತಿಷ್ಠೆ, ಮಹಾಪೂಜೆ, ಪ್ರಸಾದ ವಿತರಣೆ, ನಂತರ ಅನ್ನ ಸಂತರ್ಪಣೆ ನೆರವೇರಲಿದೆ. ಸಂಜೆ 6 ಗಂಟೆಗೆ ಮಹಾದೇವರ ದೇವಸ್ಥಾನದಲ್ಲಿ ಪ್ರಾರ್ಥನೆ, ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆ, ಬ್ರಹ್ಮಕಳಶ ಪ್ರತಿಷ್ಠೆ, ಕುಂಭೇಷ ಕರ್ಕರಿ ಪೂಜೆ, ನಿದ್ರಾಕಳಶ ಪೂಜೆ, ಶಯ್ಯಾಪೂಜೆ, ತತ್ವಕಳಸ ಪೂಜೆ, ಜೀವಕಳಶ ಪೂಜೆ, ಜೀವೋದ್ವಾಷಣೆ, ಜಲೋದ್ಧಾರ, ಬಿಂಬಶುದ್ಧಿ, ಪಶುದಾನ ಪುಣ್ಯಾಹ, ಪ್ರಸಾದ ಶುದ್ಧಿ, ಆದಿವಾಸ ಪೂಜೆ, ಶಯನಾದಿವಾಸ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಮಾ.3 ರಂದು ಬೆಳಿಗ್ಗೆ 5 ಗಂಟೆಗೆ ಗಣಪತಿ ಹೋಮ, ರುದ್ರಹೋಮ, ಪ್ರತಿಷ್ಠಾ ಹೋಮ, ತತ್ವಹೋಮ, ಕಲಾಹೋಮ ಜರುಗಲಿದ್ದು, ಬೆಳಿಗ್ಗೆ 7.45 ನಿಮಿಷಕ್ಕೆ ಮೀನ ಲಗ್ನದ ಶುಭಮುಹೂರ್ತದಲ್ಲಿ ಮಹಾದೇವರ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಳಶಾಭಿಷೇಕ, ಕುಂಭಕರ್ಕರಿ ಮಹಾಪೂಜೆ, ಮಹಾದೇವರ ಉತ್ಸವ, ಪ್ರಸಾದ ವಿತರಣೆ ಜರುಗಲಿದೆ. ಬೆಳಿಗ್ಗೆ 10 ಗಂಟೆಗೆ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ್ ಕುಮಾರ್ ಹೊಸಮನೆ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಸದಸ್ಯ ಯದುವೀರ್ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಕುಶಾಲನಗರ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ತಾ.ಪಂ ಮಾಜಿ ಅಧ್ಯಕ್ಷ ವಿ.ಕೆ.ಲೋಕೇಶ್, ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಗ್ರಾ.ಪಂ ಅಧ್ಯಕ್ಷರಾದ ಹೆಚ್.ಎನ್.ಧನಲಕ್ಷ್ಮಿ, ತಕ್ಕರಾದ ಕೆ.ಎ.ತಿಮ್ಮಯ್ಯ, ದೇವಾಲಯ ಸ್ಥಳ ದಾನಿ ಕೆ.ಎನ್.ವಾಸು, ಅರ್ಚಕರ ವಸತಿ ಗೃಹ ಸ್ಥಳ ದಾನಿ ಎಂ.ಬಿ.ಮೊಣ್ಣಪ್ಪ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಂತರ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 5.30 ಗಂಟೆಗೆ ವಾರ್ಷಿಕೋತ್ಸವ ಪ್ರಯುಕ್ತ ದೇವತಾ ಉತ್ಸವ, ಮಹಾಪ್ರಾರ್ಥನೆ, ಧ್ವಜಾರೋಹಣ, ತೂಚಂ ಬಲಿ, ಅಂದಿ ಬೆಳಕು, ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಜರುಗಲಿದೆ. ಮಾ.4 ರಂದು ಬೆಳಿಗ್ಗೆ 5 ಗಂಟೆಗೆ ಇರುಬೆಳಕು ಉತ್ಸವ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂರ್ಪಣೆ ಜರುಗಲಿದ್ದು, ಸಂಜೆ 5 ಗಂಟೆಗೆ ನೆರ್ಪು ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಾ.5 ರಂದು ಬೆಳಿಗ್ಗೆ 9 ಗಂಟೆಗೆ ದೇವರಿಗೆ ಪಂಚಾಮೃತಾ ಅಭಿಷೇಕ, ಕ್ಷೀರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂಪರ್ತಣೆ ನಡೆಯಲಿದ್ದು, ಸಂಜೆ 5 ಗಂಟೆಗೆ ದೇವರು ಜಳಕಕ್ಕೆ ಹೋಗುವುದು, 6.30 ಗಂಟೆಗೆ ದೇವಸ್ಥಾನ ಆವರಣದಲ್ಲಿ ದೇವರ ಪೂಜೆ, ನೃತ್ಯ ಭಂಡಾರ ಅರ್ಪಣೆ, ಧ್ವಜಾ ಆರೋಹಣ, ನವ ಕಳಶಾಭಿಷೇಕ, ಸಂಪ್ರೋಕ್ಷಣೆ, ಮಹಾಮಂತ್ರಾಕ್ಷತೆ, ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ತಕ್ಕ ಮುಖ್ಯಸ್ಥರು ಮನವಿ ಮಾಡಿದರು.









