
ಮಡಿಕೇರಿ ಫೆ.25 NEWS DESK : ವಿರಾಜಪೇಟೆ ಕ್ಷೇತ್ರದ ಜ್ವಲಂತ ಸಮಸ್ಯೆಯಾಗಿರುವ ಕಾಡಾನೆ ದಾಳಿ ಹಾಗೂ ಕಾಡು ಪ್ರಾಣಿಗಳ ಉಪಟಳವನ್ನು ತಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿಯಿಂದ ಮುಖ್ಯಮಂತ್ರಿಗಳು ಮಂಜೂರು ಮಾಡಿರುವ ರೂ.21 ಕೋಟಿಯಲ್ಲಿ ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣ ಮತ್ತಿತರ ಮುಂಜಾಗ್ರತಾ ಕ್ರಮದ ಕಾಮಗಾರಿ ನಡೆಸಲು ಸ್ಥಳ ವೀಕ್ಷಣೆ ಮಾಡಿದರು. ನಂತರ ಮಾತನಾಡಿದ ಶಾಸಕರು ವನ್ಯಜೀವಿ ಉಪಟಳ ಇರುವ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಕಾಮಗಾರಿಗಳನ್ನು ತುರ್ತು ಗತಿಯಲ್ಲಿ ಪ್ರಾರಂಭಿಸಿ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು. ಈ ಸಂದರ್ಭ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಹಿರಿಯ ಅರಣ್ಯ ಅಧಿಕಾರಿಗಳು, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಾಂಗ್ರೆಸ್ ಮುಖಂಡರು, ಸ್ಥಳೀಯ ಪ್ರಮುಖರು ಹಾಗೂ ಗ್ರಾಮಸ್ಥರ ತಂಡದೊಂದಿಗೆ ಶಾಸಕರು ಸ್ಥಳ ವೀಕ್ಷಣೆ ಮಾಡಿ ಅರಣ್ಯಾಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಆಯ್ದ ಸ್ಥಳಗಳಲ್ಲಿ, ಹೆಚ್ಚು ಪ್ರಾಣಿ ಉಪಟಳ ಇರುವ ಜಾಗ ಗುರುತಿಸಿ ರೇಡಿಯೋ ಕಾಲರ್ ಅಳವಡಿಸುವ ಬಗ್ಗೆ ಚರ್ಚಿಸಲಾಯಿತು.









