

ಮಡಿಕೇರಿ NEWS DESK ಫೆ.25 : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರಪೇಟೆ ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಎಸ್.ಎ.ಅಶೋಕ್ (65) ಎಂಬವರೇ ಮೃತ ದುರ್ದೈವಿಯಾಗಿದ್ದಾರೆ. ಕೃಷಿಕರಾಗಿದ್ದ ಅಶೋಕ್ ಅವರು ಹೆಬ್ಬಾಲೆಯ ಕಡೆ ಬರುತ್ತಿದ್ದಾಗ ಕುಶಾಲನಗರದಿಂದ ಸಿದ್ದಲಿಂಗಪುರ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








