




ಮಡಿಕೇರಿ NEWS DESK ಫೆ.26 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆಯಿಂದಲೇ ರುದ್ರಹೋಮ, ಏಕಾದಶ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ನಡೆಯಿತು. ಅಲ್ಲದೆ ವಿವಿಧ ವಿಶೇಷ ಪೂಜಾ ಕೈಂಕರ್ಯ ಮತ್ತು ಅರ್ಚನೆಗಳಿಗೆ ಸಾಕ್ಷಿಯಾದ ನೂರಾರು ಭಕ್ತರಿಗೆ ಪ್ರಸಾದ ವಿತರಿಸಲಾಯಿತು.